ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ.
ಪ್ರಕರಣದ ಆರೋಪಿಗಳಾದ ಅಲ್ತಾಫ್ ಹಾಗೂ ಸುಧೀರ ಎಂಬಾತನನ್ನು ಬಂಧಿಸಲಾಗಿದ್ದು ಇವರು ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ
ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್ ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯವಾಗಿದ್ದು ಅಲ್ತಾಫ್ ಶುಕ್ರವಾರ ಸಂತ್ರಸ್ತರಿಗೆ ಕರೆ ಮಾಡಿ ಒಂದು ಕಡೆಗೆ ಬರಲು ತಿಳಿಸಿದ್ದನು. ಅದರಂತೆ ಅಲ್ಲಿಗೆ ಹೋದ ಸಂತ್ರಸ್ತೆಯನ್ನು ಆರೋಪಿ ಅಪಹರಿಸಿ ಕೊಂಡು ಹೋಗಿರುವುದಾಗಿ ದೂರಲಾಗಿದೆ.
ಅಲ್ಲಿ ಅಲ್ತಾಫ್ ಡ್ರಿಂಕ್ಸ್ ನಲ್ಲಿ ಮತ್ತು ಬರಿಸುವ ಪದಾರ್ಥವನ್ನು ಬೆರೆಸಿ ಕೊಟ್ಟಿದ್ದು ಆ ಸಂದರ್ಭದಲ್ಲಿ ಆತ ತನ್ನ ಮೇಲೆ ಅತ್ಯಾಚಾರಿ ಎಸಗಿರುವುದಾಗಿ ಸಂತ್ರಸ್ತ ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಆರೋಪಿ ಅಲ್ತಾಫ್ ಹಾಗೂ ಡ್ರಿಂಕ್ಸ್ ಅನ್ನು ತಂದುಕೊಟ್ಟ ಸುಧೀರ್ ನನ್ನು ಬಂಧಿಸಿ, ಅವರಿಬ್ಬರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೃತ್ಯ ಎಸಗಿದ ಬಳಿಕ ಆರೋಪಿ ಅಲ್ತಾಫ್ ಆತನ ಕಾರಿನಲ್ಲಿ ಸಂತ್ರಸ್ತ ಯುವತಿಯನ್ನು ಆಕೆಯ ಮನೆ ಬಳಿ ಬಿಟ್ಟು ಹೋಗಿದ್ದಾನೆ. ತೀವ್ರವಾಗಿ ಅಸ್ವಸ್ಥಗೊಂಡಿರುವ ಯುವತಿಯನ್ನು ಕಾರ್ಕಳ ಆಸ್ಪತ್ರೆಯಿಂದ ಮಣಿಪಾಲ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಈ ಪ್ರಕರಣದ ಕಾನೂನು ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಅವರು ತಿಳಿಸಿದ್ದಾರೆ
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…