ಉಡುಪಿ: ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರೆದಿದೆ. ಕೇಸ್ ಸಂಬಂಧ ಈಗಾಗಲೇ ಆರು ಮಂದಿ ಆರೋಪಿಗಳು ಜೈಲು ಕಂಬಿ ಎಣಿಸುತ್ತಿದ್ದು, ತನಿಖಾಧಿಕಾರಿಗಳು ಮಾದಕ ಜಾಲದ ಬೆನ್ನು ಬಿದ್ದಿದ್ದಾರೆ. ಡ್ರಗ್ಸ್ ಜಾಲದ ಸರಪಳಿ ಕಾರ್ಕಳದಿಂದ ಬೆಂಗಳೂರು, ಬೆಂಗಳೂರಿಂದ ಆಂಧ್ರಪ್ರದೇಶಕ್ಕೆ ಲಿಂಕ್ ಆಗಿರುವುದು ಬಯಲಾಗಿದೆ. ಹಾಗಾಗಿ ಹಣ ವರ್ಗಾವಣೆ ಆಗಿರುವ ಬ್ಯಾಂಕ್ ಖಾತೆಗಳ ಮೇಲೆ ಪೊಲೀಸರು ನಿಗಾ ಇಟ್ಟು ತನಿಖೆ ಮುಂದುವರಿಸಿದ್ದಾರೆ.
ಆರೋಪಿ ಅಲ್ತಾಫ್‌ನ ಬೆನ್ನತ್ತಿದ್ದ ಪೊಲೀಸರಿಗೆ ಡ್ರಗ್ಸ್ ಜಾಲದ ನಿಜ ದರ್ಶನವಾಗಿದೆ. ಪ್ರಕರಣದ ಆಳ ಬಗೆದಷ್ಟು ಹೊಸ ಹೊಸ ಹೆಸರುಗಳು, ಅಮಲು ಪದಾರ್ಥಗಳು ಪತ್ತೆಯಾಗುತ್ತಿವೆ. ಆರೋಪಿಗೆ ಡ್ರಗ್ಸ್ ಎಲ್ಲಿಂದ ಬಂತು? ಅಮಲು ಪದಾರ್ಥಗಳನ್ನು ಕೊಟ್ಟವರು ಯಾರು? ಎಂಬ ಪ್ರಶ್ನೆಗಳನ್ನಿಟ್ಟುಕೊಂಡೇ ಪೊಲೀಸರು ತನಿಖೆ ಆರಂಭಿಸಿದ್ದರು. ಇದೀಗ ಪೊಲೀಸರು ಬೆಂಗಳೂರಿಗೆ ಎಂಟ್ರಿಯಾಗಿದ್ದು, ಮತ್ತೋರ್ವ ಆರೋಪಿ ಮೂಲದ ಬಗ್ಗೆ ತನಿಖೆ ಮಾಡುತ್ತಿದ್ದಾರೆ.
ಅಲ್ತಾಫ್‌ಗೆ ಡ್ರಗ್ಸ್ ನೀಡಿದ್ದ ವ್ಯಕ್ತಿ ಅಭಯ್. ಈತನ ಜೊತೆ ಡ್ರಗ್ಸ್ ದಂಧೆಯಲ್ಲಿದ್ದವರು ಗಿರಿರಾಜ್, ಜಾನ್ ಶಂಕರಪುರ ಹಾಗೂ ಕಾರ್ಕಳದ ಶಾಹಿದ್. ಈಗಾಗಲೇ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದರ ನಡುವೆ ಕೃತ್ಯಕ್ಕೆ ಬಳಸಿದ್ದ ಕಾರಿನಲ್ಲಿ ಹಾಗೂ ಆರೋಪಿಗಳನ್ನು ಸೆರೆ ಹಿಡಿಯುವಾಗ ಸಿಕ್ಕ ಮಾದಕ ವಸ್ತುಗಳು ನಿಷೇಧಿತ ಎಂಡಿಎಂಎ ಎಂಬುದು ದೃಢಪಟ್ಟಿದೆ. ಬೆಂಗಳೂರಿನ ಆ ವ್ಯಕ್ತಿಯಿಂದಲೇ ಆರೋಪಿಗಳು ಡ್ರಗ್ಸ್ ಖರೀದಿಸಿದರು ಎಂಬುದು ತನಿಖೆ ವೇಳೆ ಬಯಲಾಗಿದೆ. ಜೊತೆಗೆ ಎಂಡಿಎಂಎ ಮಾದಕ ದ್ರವ್ಯಕ್ಕೆ ಕರಾವಳಿಯಲ್ಲಿ ಭಾರೀ ಬೇಡಿಕೆ ಇರುವುದೂ ಬಹಿರಂಗವಾಗಿದೆ. ಹೀಗಾಗಿ ಬೆಂಗಳೂರು ಮೂಲದ ಡ್ರಗ್ ಪೆಡ್ಲರ್ ಬೆನ್ನು ಹತ್ತಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರಿನ ಡ್ರಗ್ ಪೆಡ್ಲರ್‌ನನ್ನು ವಶಕ್ಕೆ ಪಡೆದ ಬೆನ್ನಲ್ಲೇ ಮಾದಕ ಜಾಲದ ಮೂಲಕ್ಕೆ ಪೊಲೀಸರು ಕೈ ಹಾಕಿದ್ದಾರೆ. ಆರು ಮಂದಿ ಆರೋಪಿಗಳ ಬಂಧನ ಆಗುತ್ತಿದ್ದಂತೆ ಅವರ ಲಿಂಕ್‌ನಲ್ಲಿರುವ ಮತ್ತಷ್ಟು ಪೆಡ್ಲರ್‌ಗಳು, ಗ್ರಾಹಕರ ಫೋನ್‌ಗಳು ಸ್ವಿಚ್ ಆಫ್ ಆಗಿವೆ. ಪೊಲೀಸರ ತನಿಖೆಗೆ ಈ ಬೆಳವಣಿಗೆ ಕೊಂಚ ಹಿನ್ನಡೆಯಾಗಿದ್ದು, ಕೇಸ್ ಸಂಬಂಧ ಕೆಲವು ವರದಿಗಳಿಗಾಗಿ ಪೊಲೀಸರು ಕಾದು ಕುಳಿತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…