ಕಾರ್ಕಳ : ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಎರಡು ದಿನಗಳ ಹಿಂದೆ ವಶಕ್ಕೆ ಪಡೆದುಕೊಂಡ ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು ಆ.28ರಂದು ಬಂಧಿಸಿದ್ದಾರೆ. ಅವರನ್ನು ಕೂಡ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ಕೊಳ್ಳಲಾಗಿದೆ.
ಬಂಧಿತ ಆರೋಪಿಗಳ ಪೈಕಿ ಅಭಯ್‌ನನ್ನು ಪೊಲೀಸರು ಈಗಾಗಲೇ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದರು. ಉಳಿದ ಇಬ್ಬರು ಆರೋಪಿಗಳಾದ ಅಲ್ತಾಫ್ ಹಾಗೂ ರಿಚರ್ಡ್ ಕ್ಸೇವಿಯರ್‌ನ ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಅವಧಿ ಆ.27ಕ್ಕೆ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಕಾರ್ಕಳ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.
ಇವರಿಬ್ಬರನ್ನು ಹೆಚ್ಚಿನ ತನಿಖೆ ಒಳಪಡಿಸಬೇಕಾಗಿರುವುದರಿಂದ ಮತ್ತೆ ಪೊಲೀಸ್ ವಶಕ್ಕೆ ನೀಡುವಂತೆ ಪೊಲೀಸರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಕೋರ್ಟ್ ಈ ಇಬ್ಬರು ಆರೋಪಿಗಳನ್ನು ಮತ್ತೆ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.
ಪ್ರಕರಣದ ಸಂತ್ರಸ್ತೆಯನ್ನು ಕಾರ್ಕಳ ನ್ಯಾಯಾಲಯದ ಮುಂದೆ ಬುಧವಾರ ಪೊಲೀಸರು ಹಾಜರುಪಡಿಸಿದ್ದು, ಆಕೆ ನ್ಯಾಯಾದೀಶರ ಮುಂದೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿ ಸೀಲ್ ಮಾಡಲಾಗಿದ್ದು, ಇದೀಗ ಆ ಹೇಳಿಕೆ ಪೊಲೀಸರ ಕೈಸೇರಿದೆ ಎಂದು ತಿಳಿದು ಬಂದಿದೆ. ಜಾರ್ಜ್‌ಶೀಟ್ ಸಲ್ಲಿಕೆ ಸಮಯದಲ್ಲಿ ಈ ಲಕೋಟೆ ಸೀಲ್‌ನ್ನು ತನಿಖಾಧಿಕಾರಿಗಳು ತೆರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…