Featured

ಕಾರ್ಕಳ : ಯುವತಿ ಅತ್ಯಾಚಾರ ಪ್ರಕರಣ ; ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧನ

ಕಾರ್ಕಳ : ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಎರಡು ದಿನಗಳ ಹಿಂದೆ ವಶಕ್ಕೆ ಪಡೆದುಕೊಂಡ ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು ಆ.28ರಂದು ಬಂಧಿಸಿದ್ದಾರೆ. ಅವರನ್ನು ಕೂಡ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ಕೊಳ್ಳಲಾಗಿದೆ.

ಬಂಧಿತ ಆರೋಪಿಗಳ ಪೈಕಿ ಅಭಯ್‌ನನ್ನು ಪೊಲೀಸರು ಈಗಾಗಲೇ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದರು. ಉಳಿದ ಇಬ್ಬರು ಆರೋಪಿಗಳಾದ ಅಲ್ತಾಫ್ ಹಾಗೂ ರಿಚರ್ಡ್ ಕ್ಸೇವಿಯರ್‌ನ ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಅವಧಿ ಆ.27ಕ್ಕೆ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಕಾರ್ಕಳ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.

ಇವರಿಬ್ಬರನ್ನು ಹೆಚ್ಚಿನ ತನಿಖೆ ಒಳಪಡಿಸಬೇಕಾಗಿರುವುದರಿಂದ ಮತ್ತೆ ಪೊಲೀಸ್ ವಶಕ್ಕೆ ನೀಡುವಂತೆ ಪೊಲೀಸರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಕೋರ್ಟ್ ಈ ಇಬ್ಬರು ಆರೋಪಿಗಳನ್ನು ಮತ್ತೆ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.

ಪ್ರಕರಣದ ಸಂತ್ರಸ್ತೆಯನ್ನು ಕಾರ್ಕಳ ನ್ಯಾಯಾಲಯದ ಮುಂದೆ ಬುಧವಾರ ಪೊಲೀಸರು ಹಾಜರುಪಡಿಸಿದ್ದು, ಆಕೆ ನ್ಯಾಯಾದೀಶರ ಮುಂದೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿ ಸೀಲ್ ಮಾಡಲಾಗಿದ್ದು, ಇದೀಗ ಆ ಹೇಳಿಕೆ ಪೊಲೀಸರ ಕೈಸೇರಿದೆ ಎಂದು ತಿಳಿದು ಬಂದಿದೆ. ಜಾರ್ಜ್‌ಶೀಟ್ ಸಲ್ಲಿಕೆ ಸಮಯದಲ್ಲಿ ಈ ಲಕೋಟೆ ಸೀಲ್‌ನ್ನು ತನಿಖಾಧಿಕಾರಿಗಳು ತೆರೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

15 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

15 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

15 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

16 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

20 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

20 hours ago