Featured

ಕಾರ್ಕಳ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ; ಓರ್ವ ಆರೋಪಿ ಸೆರೆ – vishwanews24

ಕಾರ್ಕಳ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ; ಓರ್ವ ಆರೋಪಿ ಸೆರೆ

ಕಾರ್ಕಳ: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಯುವತಿಯನ್ನು ಪುಸಲಾಯಿಸಿ ಕರೆದೊಯ್ದ ಯುವಕ, ಆಕೆಗೆ ಅಮಲು ಪದಾರ್ಥ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಲಾಗಿದೆ. ಆಕೆಯ ಮೇಲೆ ಮೂವರು ದೌರ್ಜನ್ಯ ಎಸಗಿದ್ದಾರೆ ಎನ್ನಲಾಗುತ್ತಿದ್ದು ತನಿಖೆಯಿಂದ ನಿಜ ಪರಿಸ್ಥಿತಿ ತಿಳಿದು ಬರಬೇಕಿದೆ. ತೀವ್ರ ಅಸ್ವಸ್ಥಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಜರಂಗದಳ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್. ಅವರು ಘಟನೆಯನ್ನು ಖಂಡಿಸಿದ್ದು ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದಲ್ಲಿ ಠಾಣೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಕಾರ್ಕಳ ಜೋಡುರಸ್ತೆ ನಿವಾಸಿ ಅಲ್ತಾಫ್ ಎಂಬಾತನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶ್ರಮ ಜೀವಿ ಸಮಾಜ ಭೋವಿ ಸಮುದಾಯದ ಬಡ ಯುವತಿಯೋರ್ವಳಿಗೆ ಮತ್ತು ಭರಿಸುವಂತ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ಅತ್ಯಂತ ಖಂಡನೀಯ. ಇದೊಂದು ಪೈಶಾಚಿಕ ಕೃತ್ಯ ಎಂದು ಘಟನೆಯನ್ನು ಮಾಜಿ ಸಚಿವ, ಶಾಸಕ ವಿ ಸುನಿಲ್ ಕುಮಾರ್ ಕಟು ಶಬ್ದಗಳಿಂದ ಟೀಕಿಸಿದ್ದಾರೆ. ಯುವತಿಯನ್ನು ಪುಸಲಾಯಿಸಿ ಅಮಲು ಪದಾರ್ಥದೊಂದಿಗೆ ಕಾರಿನಲ್ಲಿ ಸುಮಾರು ದೂರ ಪಳ್ಳಿ ತನಕ ಕರೆದೊಯ್ದು ಅಮಲು ಪದಾರ್ಥ ನೀಡಿ ಈ ಕೃತ್ಯ ನಡೆಸಿದ್ದಾರೆ ಎಂದರೆ ಇದನ್ನು ಊಹಿಸಲು ಅಸಾದ್ಯ. ಇದೊಂದು ಪೂರ್ವಯೋಜಿತ ಕೃತ್ಯ ಎನ್ನುವ ಸಂದೇಹ ದಟ್ಟವಾಗಿ ಕಾಣುತ್ತದೆ. ಪ್ರಕರಣ ಸಂಬಂಧ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಬೇಕು. ಈ ಮೂಲಕ ಪ್ರಕರಣ ಹಿಂದಿರುವ ಶಕ್ತಿಗಳನ್ನು ಪತ್ತೆ ಹಚ್ಚಿ ಬೇಧಿಸಬೇಕು. ಈ ಹಿಂದೆಯೂ ಇಂತಹ ಕೃತ್ಯ ಎಸಗಿರುವ ಸಾಧ್ಯತೆ ದೃಷ್ಟಿಯಿಂದಲೂ ಸೂಕ್ತ ತನಿಖೆಯಾಗಬೇಕು. ಸಂತ್ರಸ್ಥ ಯುವತಿಯ ಆರೋಗ್ಯ ವೆಚ್ಚವನ್ನು ಸರಕಾರ ಭರಿಸಬೇಕು. ಜಿಲ್ಲಾಡಳಿತ ಯುವತಿಗೆ ಮಾನಸಿಕ ಧೈರ್ಯ ತುಂಬಿ, ಯುವತಿ ಮತ್ತು ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದವರು ಆಗ್ರಹಿಸಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago