Featured

ಕಾರ್ಕಳ: ರಸ್ತೆಗೆ ನಾಥೂರಾಮ್ ಗೋಡ್ಸೆ ಹೆಸರು ; ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ – Vishwanews24

ಇದು ಪಂಚಾಯತ್ ನಿಂದ ಅಧಿಕೃತವಾಗಿ ಹಾಕಲಾದ ನಾಮಫಲಕವಲ್ಲ..

ಬೆಳ್ಮಣ್: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆಯೊಂದಕ್ಕೆ ನಾಥೂರಾಮ್ ಗೋಡ್ಸೆ ಹೆಸರು ಇಡಲಾಗಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.

ಬೋಳ ಗ್ರಾಮ ಪಂಚಾಯತ್ ಬಳಿಯಿರುವ ರಸ್ತೆಗೆ ‘ಪಡುಗಿರಿ ನಾಥೂರಾಮ್ ಗೋಡ್ಸೆ ರಸ್ತೆ’ ಎಂದು ನಾಮಫಲಕ ಹಾಕಲಾಗಿದೆ.

ಈ ವಿಚಾರ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

“ಇದು ಖಾಸಗಿಯವರು ಹಾಕಿದ ನಾಮಫಲಕ. ಪಂಚಾಯತ್ ನಲ್ಲಿ ಈ ಹೆಸರಿಡುವ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ. ಪಂಚಾಯತ್ ಈ ನಾಮಫಲಕ ಹಾಕಿಲ್ಲ” ಎನ್ನುತ್ತವೆ ಬೋಳ ಪಂಚಾಯತ್ ಮೂಲಗಳು.

ಈ ಬಗ್ಗೆ  ಪ್ರತಿಕ್ರಿಯೆ ನೀಡಿದ ಸ್ಥಳೀಯ ಶಾಸಕ, ಸಚಿವ ಸುನೀಲ್ ಕುಮಾರ್, “ಇದು ಪಂಚಾಯತ್ ನಿಂದ ಅಧಿಕೃತವಾಗಿ ಹಾಕಲಾದ ನಾಮಫಲಕವಲ್ಲ. ಖಾಸಗಿಯವರು ಹಾಕಿದ್ದಾರೆ. ಈ ಬಗ್ಗೆ ಪಂಚಾಯತ್ ನವರು ಪರಿಶೀಲಿಸಿ ಅಧಿಕೃತ ವಸ್ತುಸ್ಥಿತಿಯನ್ನು ಸಾರ್ವಜನಿಕರ ಮುಂದಿಡುತ್ತಾರೆ” ಎಂದರು.

ಘಟನೆ ವಿವಾದ ರೂಪ ಪಡೆಯುತ್ತಿದ್ದಂತೆ ಎಚ್ಚೆತ್ತ ಗ್ರಾಮ ಪಂಚಾಯತ್ ನಾಮಫಲಕ ತೆರವು ಮಾಡಿದೆ. 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago