Featured

ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ ಎಂದು ಅನಿಸುವುದೇ ಇಲ್ಲ : ಶಾಸಕ ಸುನಿಲ್‌ ಕುಮಾರ್‌ – vishwanews24

ಸರ್ಕಾರ ಕೋಮಾಗೆ ಹೋಗಿ ಆರು ತಿಂಗಳು ಕಳೆದಿದೆ ..

ಮುಖ್ಯಮಂತ್ರಿಗಳು ರಾಜೀನಾಮೆ ಕೊಡುವ ತನಕ ನಮ್ಮ ಹೋರಾಟ ನಿಲ್ಲೋದಿಲ್ಲ : ಶಾಸಕ ಸುನಿಲ್‌ ಕುಮಾರ್‌

ಕಾರ್ಕಳ : ರಾಜ್ಯದಲ್ಲಿ ಸರ್ಕಾರ ಆಡಳಿತದಲ್ಲಿದೆ ಎಂದು ಅನಿಸುವುದೇ ಇಲ್ಲ. ಎಲ್ಲವನ್ನು ಮುಚ್ಚಿಟ್ಟು ಆರೋಪಿಗಳನ್ನು ಹಿಂಬಾಗಿಲಿಂದ ರಕ್ಷಣೆ ಮಾಡುತ್ತಿದ್ದಾರೆ. ಎಲ್ಲರಿಗೂ ಒಂದೇ ಕಾನೂನು, ಅದನ್ನು ಎಲ್ಲರೂ ಪರಿಪಾಲನೆ ಮಾಡಲೆಬೇಕು. ಜೈಲಿನ ಒಳಗೆ, ಹೊರಗೆ ಒಂದೇ ನಿಯಮ. ಸರ್ಕಾರವನ್ನು ಕೋಮಾದಿಂದ ಹೊರ ತರದಿದ್ದರೆ ಇಂತಹ ಘಟನೆ ಮರುಕಳಿಸುತ್ತದೆ ಎಂದು ಮಾಜಿ ಸಚಿವ, ಶಾಸಕ ಸುನಿಲ್‌ ಕುಮಾರ್‌ ಹೇಳಿದ್ದಾರೆ. ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ವಿವಾದಕ್ಕೆ ಸಂಬಂಧಿಸಿದಂತೆ ಕಾರ್ಕಳದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿಗಳ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸುನಿಲ್ ಕುಮಾರ್, ಜನಾಂದೋಲನದಿಂದ ಸರ್ಕಾರ ಸುಧಾರಿಸಬಹುದು. ಈ ಕಾಂಗ್ರೆಸ್ ಸರ್ಕಾರ ಇನ್ನೂ ನಿದ್ದೆಯಲ್ಲಿದೆ. ಸರ್ಕಾರ ಕೋಮಾಗೆ ಹೋಗಿ ಆರು ತಿಂಗಳು ಕಳೆದಿದೆ. ರಾಜ್ಯದಲ್ಲಿನ ಮಳೆಗಾಲದ ಕಷ್ಟವನ್ನು ಸರ್ಕಾರ ಕೇಳಿಲ್ಲ, ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣ ಹದಗೆಟ್ಟಿದೆ ಎಂದರು.

ಕಾಂಗ್ರೆಸ್ ಸರ್ಕಾರದ ಪತನ ಬಗ್ಗೆ ಮಾತನಾಡಿದ ಶಾಸಕ, ಸರ್ಕಾರ ಉರುಳಿಸುವ ಕಾರ್ಯಕ್ಕೆ ಬಿಜೆಪಿ ಕೈ ಹಾಕಲ್ಲ. ದಲಿತರ ಹಣವನ್ನು ದುರುಪಯೋಗೊಳಿಸಿದ ವಿರುದ್ಧ ನಮ್ಮ ಹೋರಾಟ ಇದಾಗಿದೆ. ಈ ವಿಚಾರಕ್ಕೆ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲೇಬೇಕು. ಸಿದ್ದರಾಮಯ್ಯ ಅವರಿಂದಲೇ ಸರ್ಕಾರ ನಡೆಯುತ್ತೆ ಅಂದರೆ ಅದು ಅವರ ಅಸಹಾಯಕತೆಯಷ್ಟೆ. ಬೇರೆ ಯಾರನ್ನಾದರು ಮುಖ್ಯಮಂತ್ರಿ ಮಾಡಲಿ, ಕಾಂಗ್ರೆಸ್‌ನಲ್ಲಿ ನಾಯಕತ್ವದ ಕೊರತೆ ಇದೆಯಾ? ಮುಖ್ಯಮಂತ್ರಿಗಳು ರಾಜೀನಾಮೆ ಕೊಡುವ ತನಕ ನಮ್ಮ ಹೋರಾಟ ನಿಲ್ಲೋದಿಲ್ಲ ಎಂದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

16 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

16 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

16 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

17 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

21 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

21 hours ago