ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಫೆ.6ರಂದು ಬಿಜೆಪಿ ಬೃಹತ್ ಪ್ರತಿಭಟನೆ – vishwanews24
ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿಗಳ ವಿರುದ್ಧ ಫೆ. 6ರಂದು ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ
ಕಾರ್ಕಳ : ರಾಜ್ಯದ ಕಾಂಗ್ರೆಸ್ ಸರಕಾರದಿಂದಾಗಿರುವ ಬೆಲೆಯೇರಿಕೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಫೆ. 6ರಂದು ಕಾರ್ಕಳದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬೆಳಗ್ಗೆ 10 ಗಂಟೆಗೆ ಸುನಿಲ್ ಕುಮಾರ್ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ.
ಅಧಿಕಾರಕ್ಕೆ ಬಂದ ಬಳಿಕ ಹಾಲು, ಪೆಟ್ರೋಲು, ಡೀಸೆಲ್, ಬಸ್ ಟಿಕೆಟ್, ರೈತರ ಪಹಣಿ, ವಿದ್ಯುತ್, ಸರಕಾರಿ ಪ್ರಮಾಣಪತ್ರಗಳು…ಹೀಗೆ ಪ್ರತಿಯೊಂದರ ಬೆಲೆ ಏರಿಸಿ ಕಾಂಗ್ರೆಸ್ ಸರಕಾರ ಬಡವರ ಮತ್ತು ಜನಸಾಮಾನ್ಯರ ರಕ್ತ ಹೀರುತ್ತಿದೆ. ಸರಕಾರದ ನೀತಿಗಳಿಂದಾಗಿ ರಾಜ್ಯ ದಿವಾಳಿಯತ್ತ ಸಾಗುತ್ತಿದ್ದು ಇದನ್ನು ಪ್ರತಿಭಟಿಸಿ ಬೃಹತ್ ಹೋರಾಟ ನಡೆಯಲಿದೆ ಎಂದು ಬಿಜೆಪಿ ಕಾರ್ಕಳ ಮಂಡಲ ಪ್ರಕಟಣೆ ತಿಳಿಸಿದೆ.
