Featured

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ – vishwanews24

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕೆಲ ಪ್ರದೇಶಗಳಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ರೆಂಜಾಳ ಗ್ರಾಮದಲ್ಲಿ ಪರಿಸ್ಥಿತಿ ಗಂಭೀರಗೊಂಡಿದೆ.

ರೆಂಜಾಳ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಡಿಸಿ ಸ್ವರೂಪಾ ಟಿ.ಕೆ, ತಹಶೀಲ್ದಾ‌ರ್ ಪ್ರದೀಪ್ ಆರ್. ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನಾಹುತವನ್ನು ತಪ್ಪಿಸುವ ಮುನ್ನೆಚ್ಚರಿಕೆ ಕ್ರಮವಾಗಿ ಸಂತ್ರಸ್ತ ಕುಟುಂಬದ ಸದಸ್ಯರನ್ನು ಸುರಕ್ಷತೆಯ ದೃಷ್ಟಿಯಿಂದ ಸಮೀಪದ ಸರಕಾರಿ ಶಾಲೆಯಲ್ಲಿ ತಾತ್ಕಾಲಿಕವಾಗಿ ವಾಸಿಸಲು ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಪರಿಸ್ಥಿತಿಯನ್ನು ಪರಿಶೀಲಿಸಿ, ಸ್ಥಳೀಯರೊಂದಿಗೆ ಚರ್ಚೆ ನಡೆಸಿ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದರು. ಭೂಕುಸಿತದ ಕಾರಣ ಹಾಗೂ ಮುಂದಿನ ಅಪಾಯದ ಮುನ್ಸೂಚನೆಗಳನ್ನು ಅಧ್ಯಯನ ಮಾಡಲು ಬೆಂಗಳೂರು ಜಿಎಸ್ ಐ ಸಂಸ್ಥೆ ಭೂ ವಿಜ್ಞಾನಿಗಳ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago