ಕಾರ್ಕಳ : ಕಜಕಿಸ್ತಾನದಲ್ಲಿ ನಡೆದ ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್‍ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಲಭಿಸಿದೆ. ದೇಶವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ.
ಉಡುಪಿಯ ಅಕ್ಷತಾ ಪೂಜಾರಿ ಬೋಳ ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಹಲವು ಚಿನ್ನದ ಪದಕ ಗೆದ್ದಿದ್ದಾರೆ. ಕಳೆದ ಬಾರಿಯ ಏಕಲವ್ಯ ಪ್ರಶಸ್ತಿ ಸಹ ಪಡೆದುಕೊಂಡಿದ್ದಾರೆ. ಈ ವರ್ಷ ಕಜಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ಶಿಪ್‍ನಲ್ಲಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಪತ್ನಿ ಜೊತೆ ಲಕ್ಕಿ ಕಾರಿನಲ್ಲಿ ಬಂದು ನಾಮಪತ್ರ ಸಲ್ಲಿಸಿದ ಹೊರಟ್ಟಿ
ಅಕ್ಷತಾ ಅವರು ರಾಜ್ಯ ಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 5 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿಗೆ ಭಾಜನರಾಗಿದ್ದರು. ರಾಷ್ಟ್ರಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 4 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿ ಗೆದ್ದಿದ್ದಾರೆ. ಏಷ್ಯಾ ಮಟ್ಟದಲ್ಲೂ 4 ಬಾರಿ ಚಿನ್ನ, ಕಾಮನ್ ವೆಲ್ತ್ ಕೂಟದಲ್ಲಿ 8 ಚಿನ್ನ, ವಿಶ್ವ ಮಟ್ಟದಲ್ಲಿ 2 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…