Featured

ಕಾರ್ಕಳ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತ್ಯು ; ಮೂವರು ವೈದ್ಯರ ವಿರುದ್ಧ ಪ್ರಕರಣ ದಾಖಲು – vishwanews24

ಕಾರ್ಕಳ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತ್ಯು ಮೂವರು ವೈದ್ಯರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ: ವೈದ್ಯರ ನಿರ್ಲಕ್ಷ್ಯದ ಕುರಿತು ಉಡುಪಿ ಜಿಲ್ಲಾ ಸರ್ಜನ್ ನೀಡಿದ ವರದಿಯ ಆಧಾರದಂತೆ ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣಕ್ಕೆ ಝುಬೈದ(52) ಎಂಬವರು ಮೇ 10ರಂದು ಕಾರ್ಕಳ ಸ್ಪಂದನಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಡ್ರಿಪ್ಸ್ ಹಾಕಿದರು. ಈ ವೇಳೆ ವೈದ್ಯರು ಬಂದು ಪರಿಶೀಲಿಸುವಂತೆ ಝುಬೈದ ಅವರ ಮಗಳು ಮುಬೀನಾ ಕೇಳಿಕೊಂಡರು, ವೈದ್ಯರು ಬಂದಿರುವುದಿಲ್ಲ, ನಂತರ ಬಂದ ಡಾ.ನಾಗರತ್ನ ಕೂಡಲೇ ಆಪರೇಷನ್ ಮಾಡಬೇಕು, ಝುಬೇದ ಅವರ ಜೀವಕ್ಕೆ ಅಪಾಯ ಇದೆ ಎಂದು ಹೇಳಿದರು.

ನಂತರ ಅವರನ್ನು ಆಸ್ಪತ್ರೆಯ ಥಿಯೇಟರ್‌ಗೆ ಕರೆದುಕೊಂಡು ಹೋಗಿದ್ದು, ನಂತರ ಡಾ.ನಾಗರತ್ನ ಡಾ.ರೆಹಮತ್ತುಲ್ಲಾ ಹಾಗೂ ಡಾ.ತುಷಾರ ಆಪರೇಷನ್ ಥಿಯೇಟರ್ ಒಳಗಡೆ ಹೋಗಿದ್ದು, ನಂತರ ಹೊರಗಡೆ ಬಂದ ಡಾ.ರೆಹಮತ್ತುಲ್ಲಾ, ಝುಬೈದ ಮೃತಪಟ್ಟಿರುವುದಾಗಿ ತಿಳಿಸಿದರು. ಝುಬೈದ ಅವರಿಗೆ ವೈದ್ಯಾಧಿಕಾರಿಯವರು ಸಮಯಕ್ಕೆ ಸರಿಯಾದ ಚಿಕಿತ್ಸೆ ನೀಡದೇ ಹಾಗೂ ಸರಿಯಾಗಿ ಪರೀಕ್ಷೆ ಮಾಡದೇ ನಿರ್ಲಕ್ಷತನದಿಂದ ಆಪರೇಷನ್ ಮಾಡಿರುವುದು ಎಂದು ಆರೋಪಿಸಿ ಮುಬೀನಾ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಮೃತ ಝುಬೈದ ಅವರ ಮರಣದ ಬಗ್ಗೆ ಹಾಗೂ ವೈಧ್ಯಾಧಿಕಾರಿಯವರ ನಿರ್ಲಕ್ಷತೆಯ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ಕೋರಿಕೆ ಪತ್ರ ನೀಡಿದ್ದು ಈ ಬಗ್ಗೆ ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಎಚ್.ಅಶೋಕ ಪರಿಶೀಲನೆ ನಡೆಸಿ ವರದಿ ನೀಡಿದ್ದರು.

ಈ ವರದಿಯಲ್ಲಿ ಆರೋಪಿ ವೈಧ್ಯಾಧಿಕಾರಿಗಳಾದ ಡಾ.ನಾಗರತ್ನ ಡಾ.ರೆಹಮತ್ತುಲ್ಲಾ ಹಾಗೂ ಡಾ.ತುಷಾರ ಎಂಬವರು ಆಪರೇಶನ್ ಮಾಡುವ ಮೊದಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಇರುವುದು ಮತ್ತು ಸಾಕಷ್ಟು ಕಾಲಾವಕಾಶ ಇದ್ದರೂ ರೋಗಿಯ ಸ್ಥಿತಿಗತಿಯ ಬಗ್ಗೆ ರೋಗಿಗೆ ಸಂಬಂಧ ಪಟ್ಟವರಿಗೆ ಮಾಹಿತಿ ನೀಡದೇ ಇರುವುದು ಕಂಡು ಬಂದಿದೆ. ಅದೇ ರೀತಿ ರೋಗಿ ಆಪರೇಷನ್ ಆಗುವಾಗಲೇ ಮೃತಪಟ್ಟಿ ರುವುದು ವೈದ್ಯಾಧಿಕಾರಿಗಳ ಲಿಖಿತ ಹೇಳಿಕೆಯಿಂದ ದೃಡಪಟ್ಟಿದೆ. ಅದರಂತೆ ಶಸ್ತ್ರ ಚಿಕಿತ್ಸೆ ನೀಡಿದ ವೈದ್ಯರ ನಿರ್ಲಕ್ಷತನ ಮೇಲ್ಮೊಟಕ್ಕೆ ಕಂಡು ಬಂದಿರುವುದು ಈ ವರದಿ ಅಭಿಪ್ರಾಯ ಪಟ್ಟಿದೆ. ಅದರಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಮೂವರು ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago