Featured

ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ; ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಭಾರೀ ಆಕ್ರೋಶ – vishwanews24

 

ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ; ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಭಾರೀ ಆಕ್ರೋಶ

ಉಡುಪಿ:  ಜಿಲ್ಲೆಯ ಕಾರ್ಕಳ ತಾಲೂಕಿನ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಪೇಟೆಯ ಲಯನ್ಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಪ್ರವಾದಿ ಜನ್ಮದಿನಾಚರಣೆ ಪ್ರಯುಕ್ತ ಈದ್ ಮಿಲಾದ್ ಆಚರಿಸಲಾಗಿತ್ತು. ಬಿಜೆಪಿ ಮುಖಂಡರೊಬ್ಬರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಕಾರ್ಯಕ್ರಮದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಹಿಂದೂ ಶಾಲೆಯ ಮಕ್ಕಳ ಪೋಷಕರಿಂದ ಕಾರ್ಯಕ್ರಮದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಮಧ್ಯೆ, ಘಟನೆ ಬಗ್ಗೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇನು ಅರಬ್​ಸ್ತಾನ ಅಂದುಕೊಂಡಿದ್ದಾರೆಯೋ? ಶಾಲೆಗಳಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ಈದ್ ಮಿಲಾದ್ ಆಚರಣೆ ಮಾಡಿದ್ದಲ್ಲದೆ, ಅರಬ್ ರಾಷ್ಟ್ರದ ಉಡುಪು ಧರಿಸಿ ಕುಣಿದಿದ್ದಾರೆ. ಹಿಂದೂ ಮಕ್ಕಳ ಮೇಲೆ ಪ್ರಭಾವ ಬೀರುವಂತೆ ಮಾಡಿದ್ದಾರೆ. ಕೂಡಲೇ ಉಡುಪಿ ಡಿಡಿಪಿಐ ಮಧ್ಯಪ್ರವೇಶಿಸಬೇಕು. ಶಾಲೆಯನ್ನು ಸೀಜ್ ಮಾಡಿ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 hour ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago