ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಪೇಟೆಯ ಲಯನ್ಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಪ್ರವಾದಿ ಜನ್ಮದಿನಾಚರಣೆ ಪ್ರಯುಕ್ತ ಈದ್ ಮಿಲಾದ್ ಆಚರಿಸಲಾಗಿತ್ತು. ಬಿಜೆಪಿ ಮುಖಂಡರೊಬ್ಬರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
ಕಾರ್ಯಕ್ರಮದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಹಿಂದೂ ಶಾಲೆಯ ಮಕ್ಕಳ ಪೋಷಕರಿಂದ ಕಾರ್ಯಕ್ರಮದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಈ ಮಧ್ಯೆ, ಘಟನೆ ಬಗ್ಗೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇನು ಅರಬ್ಸ್ತಾನ ಅಂದುಕೊಂಡಿದ್ದಾರೆಯೋ? ಶಾಲೆಗಳಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.
ಈದ್ ಮಿಲಾದ್ ಆಚರಣೆ ಮಾಡಿದ್ದಲ್ಲದೆ, ಅರಬ್ ರಾಷ್ಟ್ರದ ಉಡುಪು ಧರಿಸಿ ಕುಣಿದಿದ್ದಾರೆ. ಹಿಂದೂ ಮಕ್ಕಳ ಮೇಲೆ ಪ್ರಭಾವ ಬೀರುವಂತೆ ಮಾಡಿದ್ದಾರೆ. ಕೂಡಲೇ ಉಡುಪಿ ಡಿಡಿಪಿಐ ಮಧ್ಯಪ್ರವೇಶಿಸಬೇಕು. ಶಾಲೆಯನ್ನು ಸೀಜ್ ಮಾಡಿ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…