ಕಾರ್ಕಳ: ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಬುಧವಾರ ನಡೆದಿದೆ.
ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು ಎಂದಿನಂತೆ ಇಂದು ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡಿದೆ.
ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು ಒಂದು ಕಟ್ಟಡ ಸ್ಫೋಟಕ್ಕೆ ತುತ್ತಾಗಿದೆ. ಸ್ಫೋಟದ ಸಂದರ್ಭ ಒಳಗೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ಗಾಯಗೊಂಡಿದ್ದರೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡ ಸಂಪೂರ್ಣ ಹಾನಿ ಆಗಿದೆ. ಗಾಯಗೊಂಡ ಮಹಿಳೆಯರಿಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಫೋಟಕ್ಕೆ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…