Featured

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಉಡುಪಿ : ಕಳೆದ ಮಾರ್ಚ್ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಉದ್ಯಮಿ ಸುದೀಪ್ ರೈ ನೆಲ್ಯಾಡಿ ಎಂಬ ಯುವಕನ ಪ್ರಕರಣವು ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಈ ಸಾವಿನ ಪ್ರಕರಣವು ಇದೀಗ ಕಾನೂನು ಹೋರಾಟದ ಹಂತದಲ್ಲಿದ್ದು, ಪ್ರಮುಖ ಆರೋಪಿಯ ಜಾಮೀನು ಅರ್ಜಿ ವಜಾಗೊಂಡಿದೆ.

ಸುದೀಪ್ ರೈ ಅವರ ಸಾವಿಗೆ ಸೌಮ್ಯ ಶೆಟ್ಟಿ ಎಂಬಾಕೆಯ ಕಿರುಕುಳವೇ ಕಾರಣವೆಂದು ಆರೋಪಿಸಲಾಗಿದೆ. ಕಾರ್ಕಳ ತಾಲೂಕಿನ ಬಂಗ್ಲೆಗುಡ್ಡೆ ನಿವಾಸಿಯಾಗಿರುವ ಸೌಮ್ಯ ಶೆಟ್ಟಿ, ಸುದೀಪ್ ಅವರ ಮನೆಯವರಿಗೆ ತಿಳಿಸದೆ ಬಲವಂತವಾಗಿ ರಿಜಿಸ್ಟರ್ ಮದುವೆಯಾಗಿದ್ದಳು ಹಾಗೂ ಆಕೆಯಿಂದ ವಿಪರೀತ ಮಾನಸಿಕ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ದೊರೆತಿದ್ದೇ ಸುದೀಪ್ ಸಾವಿಗೆ ನೇರ ಕಾರಣವೆಂದು ಸುದೀಪ್ ಅವರ ಪೋಷಕರು ಮತ್ತು ಸ್ನೇಹಿತರು ಆರೋಪಿಸಿದ್ದರು.

 

ಈ ಕುರಿತು ಸುದೀಪ್ ಅವರ ತಂದೆ ಬಿ. ವಸಂತ ರೈ ನೆಲ್ಯಾಡಿ ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಉಡುಪಿ ಜಿಲ್ಲೆಯ ಎಸ್ಪಿ ಹರಿರಾಮ್ ಶಂಕರ್ ಅವರ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಏಪ್ರಿಲ್ 11 ರಂದು ಉಡುಪಿಯಲ್ಲಿ ಸೌಮ್ಯ ಶೆಟ್ಟಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಪ್ರಕರಣದ ತನಿಖೆ ಮುಂದುವರಿಯುತ್ತಿದ್ದು, ಈ ಹಿಂದೆ ಸೌಮ್ಯ ಶೆಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಏಪ್ರಿಲ್ 30 ರಂದು ಉಡುಪಿ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿತ್ತು. ಇದೀಗ ರಾಜ್ಯ ಉಚ್ಚ ನ್ಯಾಯಾಲಯ ಕೂಡ ಆಕೆಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago