ಕಾರ್ಕಳ : ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಕಾರ್ಕಳ ತಾಲೂಕು ಕಚೇರಿ ಮುಂದೆ ಈ ಪ್ರತಿಭಟನೆ ನಡೆಯಿತು. ಮಾಜಿ ಸಚಿವ,ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ಘೋಷಣೆಗಳನ್ನು ಕೂಗಿ ಪ್ರತಿಭಟನಕಾರರು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯಲ್ಲಿ ರಾಜ್ಯ ಸರಕಾರಕ್ಕೆ ಧಿಕ್ಕಾರ ಕೂಗಿದ ಪ್ರತಿಭಟನಕಾರರು,60% ಸರ್ಕಾರ ಎಂದು ಲೇವಡಿ ಮಾಡಿದರು. ರಾಜ್ಯ ಸರಕಾರ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ. ಇದಲ್ಲದೆ ಹಾಲು ಸಬ್ಸಿಡಿ, ಅಕ್ರಮ ಸಕ್ರಮ ಅರ್ಜಿ ತಿರಸ್ಕಾರ ಸೇರಿದಂತೆ ರಾಜ್ಯ ಸರಕಾರದ ಜನವಿರೋಧಿ ನೀತಿಯನ್ನು ಪ್ರತಿಭಟನಕಾರರು ಖಂಡಿಸಿದರು. ಕರಾವಳಿಯ ಯಕ್ಷಗಾನ, ಕೋಳಿ ಅಂಕಗಳಿಗೂ ಕಾಂಗ್ರೆಸ್ ಸರಕಾರ ಅಡ್ಡಿ ಪಡಿಸುತ್ತಿದ್ದು ಇದೊಂದು ಹಿಂದೂ ವಿರೋಧಿ ಸರಕಾರ ಎಂದು ಸುನಿಲ್ ಕುಮಾರ್ ಟೀಕಿಸಿದರು.
ನೂರಾರು ಪ್ರತಿಭಟನಾಕಾರರು “ದಂಡ ಪಿಂಡಗಳು..” ಹಾಡು ಹಾಡುವ ಮೂಲಕ ಸರ್ಕಾರವನ್ನು ಟೀಕಿಸಿದರು.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…