Featured

ಕಾರ್ಕಳ: ಸೆಕ್ಯೂರಿಟಿ ಗಾರ್ಡ್‌ಗೆ ಪಿಸ್ತೂಲ್ ತೋರಿಸಿ ಬೆದರಿಸಿ , ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ಕಳ್ಳತನ – Vishwanews24

ಕಾರ್ಕಳ: ಸೆಕ್ಯೂರಿಟಿ ಗಾರ್ಡ್‌ಗೆ ಪಿಸ್ತೂಲ್ ತೋರಿಸಿ ಬೆದರಿಸಿ ; ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ಕಳ್ಳತನ

ಕಾರ್ಕಳ: ಜ್ಯುವೆಲ್ಲರ್ಸ್ ಅಂಗಡಿಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಬೆಲೆಬಾಳುವ ಬೆಳ್ಳಿ ವಸ್ತುಗಳ ಕಳ್ಳತನ ನಡೆಸಿದ ಘಟನೆ ಕಾರ್ಕಳ ನಿಟ್ಟೆಯ ಫೆ. 26 ರ ತಡರಾತ್ರಿ ನಡೆದಿದೆ.

ಅಖಿಲೇಶ್ ಮಾಲೀಕತ್ವದ ಆರಾಧ್ಯ ಜ್ಯುವೆಲ್ಲರ್ಸ್ ಗೆ ತಡರಾತ್ರಿ 2 ಗಂಟೆಗೆ ಸುಮಾರಿಗೆ ನುಗ್ಗಿ ಕೃತ್ಯ ನಡೆಸಿದ್ದಾರೆ. ಕಳ್ಳರು ಟಿಪ್ಪರ್ ಅಡ್ಡ ಇಟ್ಟು ಅನಂತರ, ಯಾವುದೇ ರೀತಿಯಲ್ಲಿ ಗುರುತು ಸಿಗದ ಹಾಗೆ, ಮುಖಕ್ಕೆ ಮುಸುಕು ಹಾಕಿಕೊಂಡು, ಅಂಗಡಿಯ ಬೀಗ ಒಡೆದು ಒಳಗೆ ನುಗ್ಗಿ ಕಳವು‌ ಕೃತ್ಯ ಎಸಗಿದ್ದಾರೆ.

ಕೃತ್ಯದ ಬಗ್ಗೆ ಅನುಮಾನಗೊಂಡ ಸ್ಥಳೀಯ ಅಂಗಡಿಯ ಸೆಕ್ಯೂರಿಟಿ ಗಾರ್ಡ್ ಘಟನಾ‌ ಸ್ಥಳದತ್ತ ಹೋದಾಗ ದುಷ್ಟರ್ಮಿಗಳು ಪಿಸ್ತೂಲ್ ತೋರಿಸಿ, ಬೆದರಿಸಿದ್ದಾರೆಂಬ ಮಾಹಿತಿ ಲಭಿಸಿದೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಎಸ್ ಐ ತೇಜಸ್ವಿ ಹಾಗೂ ಸಿಬ್ಬಂದಿಗಳು ತೆರಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

13 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

14 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

15 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

15 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

15 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

15 hours ago