ಕಾರ್ಕಳ : ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯಲ್ಲಿ ನಡೆದಿದೆ.
ಸುಜಿತ್ (23) ಮೃತ ಕಾರ್ಮಿಕ. ಸಚ್ಚರಿಪೇಟೆಯ ತೋಟವೊಂದರಲ್ಲಿ ಕೂಲಿ ಕಾರ್ಮಿಕರಾಗಿ ಸುಜಿತ್ ಕೆಲಸ ಮಾಡುತ್ತಿದ್ದರು. ಡಿಸೆಂಬರ್ 12ರಂದು ಸಚ್ಚರಿಪೇಟೆ ಪೆಟ್ರೋಲ್ ಪಂಪ್ ಬಳಿಯ ಇಳಿಜಾರಿನ ರಸ್ತೆಯಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದಾಗ ಸೈಕಲ್ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದಿದ್ದರು.
ಇದರಿಂದ ಅವರಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…