ಕಾರ್ಕಳ : ಸೊಸೈಟಿಯಲ್ಲಿ ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಆರೋಪಿ ನೇಣಿಗೆ ಶರಣು – Vishwanews24
ಕಾರ್ಕಳ ಸೊಸೈಟಿಯಲ್ಲಿ ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಆರೋಪಿ ನೇಣಿಗೆ ಶರಣು –
ಕಾರ್ಕಳ: ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪಿಯೂ ನೇಣಿಗೆ ಕೊರಳೊಡ್ಡಿದ್ದಾನೆ.
ಮೃತನನ್ನು ಸಂತೋಷ್ ಯಾನೆ ಹರಿತನಯ ದೇವಾಡಿಗ ಎಂದು ಗುರುತಿಸಲಾಗಿದೆ. ಈತ ಈದು ಗ್ರಾಮದ ಹಾಡಿಯಲ್ಲಿ ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ ರೂ. 3 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದ.
ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜು. 25 ಮತ್ತು 26ರಂದು ವೈಭವದ ಆಟಿ ಮಾರಿಪೂಜೆ ಸಂಭ್ರಮ -Vishwanews24
ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಬ್ಯಾಂಕ್ ಸಿಬ್ಬಂದಿ ಪ್ರವೀಳಾ ಜು.14ರ ಬೆಳಿಗ್ಗೆ ಮನೆಯಿಂದ ಬ್ಯಾಂಕ್ ಗೆ ಆಗಮಿಸಿ ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಕುರಿತಂತೆ ಪ್ರಮೀಳಾರವರ ಸಹೋದರ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಯುತ್ತಿತ್ತು.
ಶನಿವಾರದಿಂದ ನಾಪತ್ತೆಯಾಗಿದ್ದ ಸಂತೋಷ್ ಈದುವಿನ ಮನೆಯೊಂದರಿಂದ ಹಗ್ಗ ಕೊಂಡುಹೋಗಿದ್ದ ಎನ್ನಲಾಗಿದೆ. ಇದೀಗ ಈದು ಮಾಪಾಲು ಹಾಡಿಯೊಂದರಲ್ಲಿ ಸಂತೋಷ್ ಶವ ಆತ್ಮಹತ್ಯೆಗೈದ ರೀತಿಯಲ್ಲಿ ಪತ್ತೆಯಾಗಿದೆ. ಶವ ಕೊಳೆತು ಹೋಗಿದ್ದು ಆತ್ಮಹತ್ಯೆಗೈದು ಎರಡು ದಿನ ಆಗಿರಬಹುದು ಎಂದು ಅಂದಾಜಿಸಲಾಗಿದೆ.
ಸಂತೋಷ್ ಯಾನೆ ಹರಿತನಯ ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾನೆ.
ಇಂದಿನಿಂದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ – Vishwanews24
