Featured

ಕಾರ್ಕಳ : ಸೌಕೂರು ಮೇಳದ ಭಾಗವತ ಡಾ. ರವಿ ಸೂರಾಲು ಅವರಿಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ -Vishwanews24

ಕಾರ್ಕಳ : ಸೌಕೂರು ಮೇಳದ ಭಾಗವತ ಡಾ. ರವಿ ಸೂರಾಲು ಅವರಿಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ -Vishwanews24

ಕಾರ್ಕಳ : ಕಾರ್ಕಳ ಹಿರ್ಗಾನದ ಶ್ರೀ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಶ್ರೀಕುಂದೇಶ್ವರ ಸಮ್ಮಾನ್ ಪ್ರಶಸ್ತಿಯನ್ನು ಸೌಕೂರು ಮೇಳದ ಭಾಗವತ ಡಾ.ರವಿಕುಮಾರ್ ಸೂರಾಲು ಅವರಿಗೆ ಪ್ರದಾನ ಮಾಡಲಾಯಿತು.

ಪಂಚ ಮೇಳಗಳ ಸಂಸ್ಥಾಪಕ ಕಿಶನ್ ಹೆಗ್ಡೆ ಮಾತನಾಡಿ, “ಯಕ್ಷಗಾನ ಉಳಿಸಿ ಬೆಳೆಸಲು ಎಲ್ಲರೂ ಬಯಲಾಟ ಆಡಿಸಬೇಕಾಗಿಲ್ಲ. ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಹತ್ತು‌ಸಮಸ್ತರು ಒಟ್ಟಾಗಿ ಆಟ ಆಡಿಸುವ ಮೂಲಕ ಕಲಾವಿದರನ್ನು ಆದರಿಸಬಹುದು” ಎಂದರು.

“ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಅಂತಾರಾಷ್ಟ್ರೀಯ ಮನ್ನಣೆ ಇದೆ. ಆರಂಭದಲ್ಲಿ ಈ ಪ್ರಶಸ್ತಿ ಬಂದಾಗ ಸಾಮಾಜಿಕ ಜಾಲತಾಣಗಳು ಸಕ್ರಿಯವಾಗಿರದ ಕಾಲದಲ್ಲೂ ದೇಶ- ವಿದೇಶಗಳಿಂದ ಅಭಿನಂದನೆಗಳ ಮಹಾಪೂರವೇ ಬಂದಿತ್ತು” ಎಂದರು.

ಉಡುಪಿ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳ ಸಾಧನೆ ಮೆಚ್ಚಿ ಮತ್ತು ಶಾಸಕ ಕೆ. ರಘುಪತಿ ಭಟ್ ಅವರ ಅಭಿವೃದ್ಧಿ ಕಾರ್ಯ ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತೆ ಸುಮಾ ನಾಯ್ಕ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ -Vishwanews24

“ಯಕ್ಷಗಾನದಲ್ಲಿ ಡಾಕ್ಟರೇಟ್ ಮಾಡಿದ ಸರಳ, ಪ್ರತಿಭಾನ್ವಿತ ಭಾಗವತರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಅಭಿನಂದನೀಯ” ಎಂದರು.

ಪ್ರಶಸ್ತಿ ಸ್ವೀಕರಿಸಿದ ಡಾ. ರವಿ ಸೂರಾಲು ಮಾತನಾಡಿ, “ಕೊರೊನಾ ಸಂಕಷ್ಟಕಾಲದಲ್ಲಿ ಕಲಾವಿದರಿಗೆ ವೇತನ ನೀಡಿದ ಸಮರ್ಥ ಯಜಮಾನ ಕಿಶನ್ ಹೆಗ್ಡೆ. ಇಂಥ ಕಲಾಪೋಷಕರೇ ಯಕ್ಷಗಾನಕ್ಕೆ ಆಸರೆ” ಎಂದರು.

ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿದರು. ಸೃಷ್ಟಿ ಕಲಾವಿದ್ಯಾಲಯದ ಸಂಸ್ಥಾಪಕ ಛಾಯಾಪತಿ ಕಂಚಿಬೈಲು, ಧರ್ಮದರ್ಶಿ ಕೃಷ್ಣರಾಜೇಂದ್ರ ಭಟ್, ವೇದಮೂರ್ತಿ ರವೀಂದ್ರ ಭಟ್, ಉದ್ಯಮಿ ಸಚ್ಚಿದಾನಂದ ಎಡಮಲೆ, ರಮಾನಂದ ತೆಂಡುಲ್ಕರ್ ಇದ್ದರು.

ಮಹಾತ್ಮ ಗಾಂಧೀಜಿ ಅವರ 73ನೇ ಪುಣ್ಯತಿಥಿ : ರಾಷ್ಟ್ರಪತಿ, ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಸ್ಮರಣೆ -Vishwanews24

ಇದೇ ಸಂದರ್ಭ ಸೌಕೂರು ಮೇಳದವರಿಂದ ಪುಷ್ಪಚಂದನ ಯಕ್ಷಗಾನ ಬಯಲಾಟ ನಡೆಯಿತು.ಶ್ರೀಕ್ಷೇತ್ರದಲ್ಲಿ ವರ್ಷಾವಧಿ ಮಹೋತ್ಸವ, ಅನ್ನಸಂತರ್ಪಣೆ, ರಂಗಪೂಜೆ, ಭೂತ ಬಲಿ, ನೇಮೋತ್ಸವ, ಸಂಪ್ರೋಕ್ಷಣೆ ನಡೆಯಿತು.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರಪುರಷರಾದ ಕೋಟಿ-ಚೆನ್ನಯ ಹೆಸರಿಡಬೇಕು : ವಿಧಾನಸಭೆಯಲ್ಲಿ ಶಾಸಕ ಉಮಾನಾಥ್ ಎ.ಕೋಟ್ಯಾನ್ ಆಗ್ರಹ -Vishwanews24   

https://youtu.be/jL4wwiGD0ng

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

20 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

20 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago