Featured

ಕಾರ್ಕಳ : ಹಿಂಜಾವೇ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ; ಬಜರಂಗದಳದ ಮೂವರು ಕಾರ್ಯಕರ್ತರ ಬಂಧನ -Vishwanews24

ಕಾರ್ಕಳ : ಹಿಂಜಾವೇ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ; ಬಜರಂಗದಳದ ಮೂವರು ಕಾರ್ಯಕರ್ತರ ಬಂಧನ -Vishwanews24

ಕಾರ್ಕಳ, : ಹಿಂದೂ ಜಾಗರಣ ವೇದಿಕೆ ಹಾಗೂ ಭಜರಂಗದಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆದು ಹಿಂದೂ ಜಾಗರಣ ವೇದಿಕೆ (ಹಿಂಜಾವೇ) ಸದಸ್ಯ ನಿಟ್ಟೆ ಗ್ರಾಮದ ಅನಿಲ್ ಪೂಜಾರಿ ಎಂಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 16 ರ ಮಂಗಳವಾರ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಭಜರಂಗದಳ ಕಾರ್ಯಕರ್ತರಾದ ಸುನಿಲ್‌, ಪ್ರಸಾದ್‌ ಹಾಗೂ ಶರತ್‌ ಎಂದು ಗುರುತಿಸಲಾಗಿದ್ದು ಮೂವರು ನಿಟ್ಟೆಯವರಾಗಿದ್ದಾರೆ.

ಇದನ್ನೂ ಓದಿ : http://ಉಡುಪಿ :ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವುದು ಕಂಡುಬ0ದಲ್ಲಿ ಕಠಿಣ ಕ್ರಮ -Vishwanews24

ಮಾರ್ಚ್ 14 ರ ರಾತ್ರಿ ನಿಟ್ಟೆಯಲ್ಲಿರುವ ಅನಿಲ್ ಪೂಜಾರಿ ಅವರ ಮನೆಗೆ ನುಗ್ಗಿದ ಗ್ಯಾಂಗ್‌ ಬಲವಂತವಾಗಿ ನುಗ್ಗಿ ಕತ್ತಿಯಿಂದ ಹಲ್ಲೆ ನಡೆಸಿತ್ತು. ಪ್ರಕರಣವನ್ನು ನೋಂದಾಯಿಸಿದ ಪೊಲೀಸರು, ಬಂಧನ ಕಾರ್ಯಾಚರಣೆ ಆರಂಭಿಸಿದ್ದು ಈ ಮೂವರು ಆರೋಪಿಗಳು ಬೆಳುವಾಯಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ತಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ : ಉಡುಪಿ : ಕೊರೊನಾ ಸುರಕ್ಷತಾ ನಿಯಮ ಪಾಲಿಸದಿದ್ದರೆ ದಂಡದ ಜೊತೆಗೆ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಸುನೀಲ್, ಶರತ್ ಮತ್ತು ಪ್ರಸಾದ್ ಅವರು ಭಜರಂಗದಳದ ಸದಸ್ಯರು ಎಂದು ವರದಿಯಾಗಿದೆ. ಈ ಮಧ್ಯೆ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಇನ್ನಿಬ್ಬರ ಹುಡುಕಾಟ ನಡೆಸುತ್ತಿದ್ದಾರೆ.

ಅಪರಾಧಿಗಳನ್ನು ಬಂಧಿಸುವ ಕಾರ್ಯಾಚರಣೆಯನ್ನು ಕಾರ್ಕಳ ಗ್ರಾಮೀಣ ಪೊಲೀಸ್‌ ಠಾಣೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ತೇಜಸ್ವಿ ಮತ್ತು ನಗರ ಠಾಣೆ ಸಬ್ ಇನ್ಸ್‌ಪೆಕ್ಟರ್ ಮಧು ಬಿ ಇ ಅವರು ಉಪ ಪೊಲೀಸ್ ವರಿಷ್ಠಾಧಿಕಾರಿ ಭರತ್‌ ರೆಡ್ಡಿ ಮತ್ತು ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಿರ್ವಹಿಸಿದರು.

ಇದನ್ನೂ ಓದಿ : ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲಾ ಇಲಾಖೆಗಳ ಜವಾಬ್ದಾರಿ : ಡಾ.ಅಂತೋನಿ ಸಬಾಸ್ಟಿಯನ್ -Vishwanews24

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

12 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

14 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

14 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

14 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

14 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago