ಕಾರ್ಕಳ : ಹಿಂದುತ್ವದ ಉಳಿವು, ಪ್ರಾಮಾಣಿಕ ಅಭಿವೃದ್ಧಿ, ರಾಜಕೀಯ ವೈಚಿತ್ರ ನಿವಾರಿಸುವ ಸಲುವಾಗಿ ರಾಷ್ಟ್ರೀಯತೆ, ದೇಶಭಕ್ತಿ ಏನೆಂಬುದು ತೋರಿಸಿಕೊಡುವ ಉದ್ದೇಶದಿಂದ ತಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ರಾಜ್ಯದ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಶ್ರೀರಾಮ ಸೇವೆ ವತಿಯಿಂದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.
ಅವರು ಫೆ. 9ರಂದು ಪರಪುವಿನಲ್ಲಿ ಪಾಂಚಜನ್ಯ ಕಚೇರಿ ಉದ್ಘಾಟನೆ ಬಳಿಕ ಮಾತನಾಡಿದರು. ಕರ್ನಾಟಕದಲ್ಲಿ ಬಹಳಷ್ಟು ಜನ ನನಗೆ ಬೆಂಬಲವಾಗಿ ನಿಂತಿದ್ದಾರೆ. ನೀವು ಸ್ಪರ್ಧೆಗೆ ಆಯ್ಕೆ ಮಾಡಿರುವ ಕ್ಷೇತ್ರ ಯೋಗ್ಯವಾಗಿದೆ. ಎಲ್ಲ ರೀತಿಯಿಂದಲೂ ನಾವು ಸಹಕರಿಸುವುದಾಗಿ ಭರವಸೆ ನೀಡಿರುತ್ತಾರೆ ಎಂದು ಮುತಾಲಿಕೆ ತಿಳಿಸಿದರು.
ಚುನಾವಣೆ ಫಂಡಿಂಗ್ ಕುರಿತು ಮಾತನಾಡಿದ ಪ್ರಮೋದ್ ಮುತಾಲಿಕ್ ನನ್ನಲ್ಲಿ ದುಡ್ಡಿಲ್ಲ. ಹಾಗಾಗಿ ಮತದಾರರು ವೋಟು ಜೊತೆಗೆ ನೋಟು ನೀಡಿ ನನ್ನನ್ನು ಬೆಂಬಲಿಸಬೇಕು. ರಾಜ್ಯದ ವಿವಿಧೆಡೆಯಿಂದ ನೂರಾರು ಕಾರ್ಯಕರ್ತರು ಕಾರ್ಕಳ ಬಂದಿದ್ದಾರೆ. ಅವರ ಊಟ, ವಾಹನ ಖರ್ಚು ಇವೆಲ್ಲದರ ಖರ್ಚು ತುಂಬಲು ಹಣದ ಅವಶ್ಯಕತೆಯಿದೆ ಎಂದು ಮುತಾಲಿಕ್ ಹೇಳಿದರು.
ಎಸ್‌ಡಿಪಿಐ ದೇಶದ್ರೋಹಿಗಳ ಸಂಘಟನೆ, ಅದೊಂದು ದೇಶದ್ರೋಹಿಗಳ, ಕೊಲೆಗಡುಕರ ಪಕ್ಷ. ಎಸ್‌ಡಿಪಿಐ ಅನ್ನು ಬ್ಯಾನ್ ಮಾಡುವಂತೆ ಕಳೆದ ಹಲವಾರು ವರ್ಷಗಳಿಂದ ಒತ್ತಾಯ ಮಾಡಿಕೊಂಡು ಬಂದಿದ್ದೇವೆ. ಅವರ ಸ್ಪರ್ಧೆಯಿಂದ ಯಾರಿಗೆ ಲಾಭ ಅನ್ನವುದು ಎಲ್ಲರಿಗೂ ತಿಳಿದ ವಿಚಾರ. ಪರೋಕ್ಷವಾಗಿ ಯಾರು ಅವರಿಗೆ ಸಹಕಾರ ಕೊಡುತ್ತಾರೆ ಅನ್ನುವುದು ಗೊತ್ತಿದೆ ಎಂದು ಮುತಾಲಿಕ್ ಹೇಳಿದರು. ಗೋ ಕಳ್ಳತನ ನಿಲ್ಲುವವರೆಗೆ, ಮುಂದಿನ ದಿನಗಳಲ್ಲಿ ಗೋ ಕಳ್ಳರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ತಮ್ಮ ಅಭಿವೃದ್ಧಿ ಕಾರ್ಯ, ಪ್ರಾಮಾಣಿಕತೆ ಬಗ್ಗೆ ಮಾತನಾಡಬೇಕೆ ಹೊರತು ಬೇರೆ ಪಕ್ಷ, ಅವರ ಅಭ್ಯರ್ಥಿ ಬಗ್ಗೆ ಮಾತನಾಡಬಾರದು. ಜನ ಇದನ್ನು ಒಪ್ಪುವುದಿಲ್ಲ ಎಂದರು.
ಶ್ರೀರಾಮ ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ, ನ್ಯಾಯವಾದಿ ಹರೀಶ್ ಅಧಿಕಾರಿ, ಪುರಸಭಾ ಸದಸ್ಯ ಲಕ್ಷ್ಮೀ ನಾರಾಯಣ ಮಲ್ಯ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…