ಕಾರ್ಕಳ: ಕಾರ್ಕಳ ಭಾಗದಲ್ಲಿ ಸಕ್ರಿಯವಾಗಿದ್ದ ಗೋ ಕಳ್ಳರ ತಂಡವನ್ನು ಬೆನ್ನಟ್ಟಿದ ಹೆಬ್ರಿ ಇನ್ಸ್‌ಪೆಕ್ಟರ್ ಸುದರ್ಶನ್ ದೊಡ್ಡಮನೆ ನೇತೃತ್ವದ ಪೊಲೀಸರು ಗೋ ಸಾಗಾಟ ಮಾಡುತ್ತಿದ್ದ ವಾಹನ ಸೇರಿ 14 ಗೋವುಗಳನ್ನು ವಶಪಡಿಸಿಕೊಂಡಿದ್ದಾರೆ.
ಹೆಬ್ರಿ ಬ್ಯಾಣ ಪರಿಸರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಗೋ ಸಾಗಾಟಗಾರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ ಪೊಲೀಸರು ವಾಹನ ಮುಟ್ಟುಗೋಲು ಹಾಕಿದ್ದಾರೆ. ಪೊಲೀಸರಿಗೆ ಹೆದರಿ ಅತಿವೇಗದಿಂದ ಚಲಿಸುತ್ತಿದ್ದಾಗ ಗೋಕಳ್ಳರ ವಾಹನ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದಿದ್ದು ಈ ವೇಳೆ ಗೋ ಕಳ್ಳರು ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಮುರಿದು ಜಾನುವಾರುಗಳನ್ನು ವಾಹನದಲ್ಲಿ ಸಾಗಾಟ ಮಾಡುತ್ತಿದ್ದರು. ರಕ್ಷಿಸಲ್ಪಟ್ಟ ಗೋವುಗಳ ಪೈಕಿ ಒಂದು ಜಾನುವಾರು ಸಾವನ್ನಪ್ಪಿದೆ. ಗಂಭೀರ ಸ್ಥಿತಿಯಲ್ಲಿರುವ ಗೋವುಗಳಿಗೆ ಪಶು ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…