ಕಾರ್ಕಳ: 18 ವರ್ಷದ ಯುವಕ ವಿಷ ಸೇವಿಸಿ ಆತ್ಮಹತ್ಯೆ- Vishwanews24
ಕಾರ್ಕಳ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ 18 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದ ಸಾವು
ಕಾರ್ಕಳ : ತಾಲೂಕಿನ ಕಸಬಾ ಗ್ರಾಮದ ಕೃಷ್ಣಗಿರಿ ಹಿರಿಯಂಗಡಿ ಎಂಬಲ್ಲಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪ್ರಜ್ವಲ್ ದೇವಾಡಿಗ(18)ಆತ್ಮಹತ್ಯೆ ಮಾಡಿಕೊಂಡವರು. ಮಾ.12 ರಂದು ರಾತ್ರಿ ವೇಳೆ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮೃತರ ಅಣ್ಣ ನೀಡಿದ ಮಾಹಿತಿಯಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಕರಾವಳಿ ಸಹಿತ ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ – Vishwanews24
