ನವದೆಹಲಿ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಮ್ಮು ಕಾಶ್ಮೀರದ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ್ದು, ಇದೇ ವೇಳೆ ಪರ್ವತಗಳಿಗೆ ಸಂಪರ್ಕ ಕಲ್ಪಿಸುವ ಎರಡು ಸೇತುವೆಗಳನ್ನು ಉದ್ಘಾಟಿಸಲಿದ್ದಾರೆ.
ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಕಥುವಾ ಜಿಲ್ಲೆಯ ಉಝ್ ಹಾಗೂ ಸಂಬ ಜಿಲ್ಲೆಯ ಬಸಂತರ್‍ನಲ್ಲಿ ನಿರ್ಮಾಣವಾಗಿರುವ ಎರಡು ಸೇತುವೆಗಳನ್ನು ಸಿಂಗ್ ದೇಶಕ್ಕೆ ಸಮರ್ಪಿಸುವವರಿದ್ದಾರೆ. ಇದರಲ್ಲಿ . ಉಝ್ ಸೇತುವೆ ಒಂದು ಕಿಲೋಮೀಟರ್ ಉದ್ದ ಮತ್ತು ಬಸಂತರ್ ಸೇತುವೆ 617.4 ಮೀಟರ್ ಉದ್ದವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆಪರೇಷನ್ ವಿಜಯ್‍ನ 20ನೇ ವರ್ಷಾಚರಣೆ ಹಿನ್ನೆಲೆ ಶನಿವಾರ ಜಮ್ಮು ಕಾಶ್ಮೀರದಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ರಾಜನಾಥ್ ಸಿಂಗ್ ಗೌರವ ಸಲ್ಲಿಸಿದರು. 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಪಾಕ್ ಸೈನಿಕರು ಹಾಗೂ ಉಗ್ರರ ಒಳನುಸುಳುವಿಕೆ ವಿರುದ್ಧ ನಡೆದ ಯುದ್ಧದಲ್ಲಿ ಭಾರತ ಜಯಗಳಿಸಿತ್ತು..
ವಿಜಯ ದಿನವನ್ನು ಭಾರತೀಯ ಸೇನೆ ವಿಜೃಂಭಣೆಯಿಂದ ಆಚರಿಸುತ್ತಿದ್ದು, ಈ ಮೂಲಕ ಆಪರೇಷನ್ ವಿಜಯ್‍ನಲ್ಲಿ ಭಾಗವಹಿಸಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ಆಪರೇಷನ್ ವಿಜಯ್‍ನ್ನು ‘ರಿಮೆಂಬರ್, ರೀಜಾಯ್ಸ್ ಆಂಡ್ ರಿನ್ಯೂ(ನೆನಪಿಡಿ, ಹೆಮ್ಮೆಪಡಿ ಮತ್ತು ನವೀಕರಿಸಿ)’ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅಲ್ಲದೆ, ಸೈನ್ಯದ ಮೂರು ಬೆಟಾಲಿಯನ್‍ಗಳು ಅಸಾಧ್ಯವಾಗದ ಸ್ಥಿಯಲ್ಲಿ ಹೋರಾಡಿದ ಶಿಖರಗಳಿಗೆ ದಂಡಯಾತ್ರೆ ಕೈಗೊಳ್ಳುತ್ತಿವೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…