Featured

ಕಾರ್ಗಿಲ್ ವಿಜಯ್ ದಿವಸ್ ; ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧ ಗೆದ್ದು ಇಂದಿಗೆ 23 ವರ್ಷ – Vishwanews24

ಕಾರ್ಗಿಲ್ ವಿಜಯ್ ದಿವಸ್ ; ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧ ಗೆದ್ದು ಇಂದಿಗೆ 23 ವರ್ಷ

ಪ್ರತಿ ವರ್ಷ ಜುಲೈ 26 ಅನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. ಕಾರ್ಗಿಲ್ ಯುದ್ಧ ನಡೆದು ಇಂದಿಗೆ 23 ವರ್ಷಗಳು ಕಳೆದಿದೆ. ಆದರೆ ಯೋಧರು ಮಾತ್ರವಲ್ಲದೆ, ಭಾರತೀಯ ಸೇನೆಯ ಜೊತೆಗೆ ಜಮ್ಮು ಮತ್ತು ಕಾಶ್ಮೀರದ ದ್ರಾಸ್ ಕಣಿವೆಯ ಜನರು ಈ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿ ಪಾಕಿಸ್ತಾನಕ್ಕೆ ಪಾಠ ಕಲಿಸಲು ಸಹಾಯ ಮಾಡಿದ್ದರ ಬಗ್ಗೆ ನಿಮಗೆ ತಿಳಿದಿದೆಯೇ. ಇದೇ ಜನರನ್ನು ನಾವು ನಾಗರಿಕ ಸೈನಿಕರು ಎಂದು ಕರೆಯುತ್ತೇವೆ. ಹೀಗೆಂದರೆ ಖಂಡಿತವಾಗಿಯೂ ತಪ್ಪಾಗಲ್ಲ. ಭಾರತೀಯ ಸೇನೆಯೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಹೋರಾಡಿದ ಅಂತಹ ಇಬ್ಬರು ನಾಗರಿಕ ಸೈನಿಕರನ್ನು ಇಂದು ನಾವು ನಿಮಗೆ ಪರಿಚಯಿಸುತ್ತಿದ್ದೇವೆ. ಯೋಧರಂತೆ ಶಸ್ತ್ರಾಸ್ತ್ರಗಳನ್ನು ಹಾರಿಸದಿದ್ದರೂ, ಯುದ್ಧದಲ್ಲಿ ಅವರ ಪಾತ್ರ ಮಾತ್ರ ಯಾವ ಸೈನಿಕರಿಗೂ ಕಡಿಮೆ ಇರಲಿಲ್ಲ.

ಪಾಕಿಸ್ತಾನವು ಭಾರತ ಸೇನೆಯ ಗಮನಕ್ಕೆ ಬರದಂತೆ ರಹಸ್ಯವಾಗಿ ತನ್ನ 5000 ಸೈನಿಕರನ್ನು ಗಡಿಯೊಳಗೆ ನುಗ್ಗಿಸಿತ್ತು. ಇದಕ್ಕೆ ಪಾಕ್‌ನ ಅಂದಿನ ಸೇನಾ ಮುಖ್ಯಸ್ಥ ಪರ್ವೇಜ್‌ ಮುಷರ್ರಫ್‌ ಕುಮ್ಮಕ್ಕು ನೀಡಿದ್ದರು. ಪಾಕ್‌ ಪಡೆಗಳು ದೇಶದ ಗಡಿಯೊಳಗೆ ನುಗ್ಗಿರುವ ಸುಳಿವನ್ನು ಸ್ಥಳೀಯ ಕುರಿಗಾಹಿಗಳು ಭಾರತೀಯ ಸೈನಿಕರಿಗೆ ನೀಡಿದರು. ಈ ಹಿನ್ನೆಲೆಯಲ್ಲಿ ಭಾರತ 5 ಯೋಧರನ್ನು ಗಸ್ತಿಗಾಗಿ ಕಳುಹಿಸಿದಾಗ, ಪಾಕ್‌ ಐವರನ್ನೂ ನಿಷ್ಕರುಣೆಯಿಂದ ಕೊಂದು ಹಾಕಿತು. ಇದರಿಂದ ಕೆರಳಿದ ಭಾರತ ಸರ್ಕಾರ, ಕೂಡಲೇ ಪಾಕಿಸ್ತಾನಿ ನುಸುಳುಕೋರರನ್ನು ದೇಶದ ಸೀಮೆಯಿಂದ ಹೊರಗಟ್ಟಲು 20,000 ಯೋಧರನ್ನು ಸಜ್ಜುಗೊಳಿಸಿತು. ಈ ಕಾರ್ಯಾಚರಣೆಗೆ ‘ಆಪರೇಶನ್‌ ವಿಜಯ್‌’ ಎಂದು ಹೆಸರಿಡಲಾಯಿತು.

ಇದನ್ನೂ ಓದಿ : ಈ ರಾಶಿಯವರು ಇಂದು ಕುಟುಂಬದವರೊಂದಿಗೆ ಆನಂದವಾಗಿ ಕಾಲ ಕಳೆಯಲಿದ್ದೀರಿ : ನೋಡಿ ಇಂದಿನ ದಿನ ಭವಿಷ್ಯ -Vishwanews24 

1999ನೇ ಇಸವಿಯ ಜಿಲೈ 26ರಂದು ಭಾರತೀಯ ಸೈನಿಕರು ಅಪರೇಶನ್ ವಿಜಯ್ ಮೂಲಕ ಕಾರ್ಗಿಲ್‌-ಡ್ರಾಸ್‌ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಈ ದಿನವನ್ನು ಕಾರ್ಗಿಲ್ ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ. ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಪತಾಕೆಯನ್ನು ಹಾರಿಸಿ 23 ವರ್ಷ ತುಂಬುತ್ತದೆ. ಯುದ್ಧದಲ್ಲಿ ಹುತಾತ್ಮರಾದ ಸೈನಿಕರನ್ನು ಸ್ಮರಿಸಲು ದೇಶವು ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್‌ ಆಚರಿಸಲಾಗುತ್ತದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

11 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

12 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

12 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

12 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

13 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago