ಧಾರವಾಡ: ‘ರೈತರು ಹಾಗೂ ಗ್ರಾಹಕರಿಗೆ ಸಿಗಬೇಕಾದ ಆಹಾರ ಧಾನ್ಯಗಳನ್ನು ತಮ್ಮ ಖಾಸಗಿ ಗೋದಾಮಿನಲ್ಲಿಟ್ಟು ಕಾರ್ಪೊರೇಟ್ ಕುಳಗಳು ಹಸಿವನ್ನು ಮಾರಾಟ ಮಾಡಲು ಹೊರಟಿವೆ. ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಕಾನೂನು ಜಾರಿಗೆ ತರುವ ಮೂಲಕ ನೀಡುತ್ತಿರುವ ಸಹಕಾರದ ವಿರುದ್ಧ ಹೋರಾಟ ಆರಂಭವಾಗಿದೆ’ ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ಹೇಳಿದರು.
ವಿವಿಧ ಕೃಷಿ ಹಾಗೂ ಸಾಮಾಜಿಕ ಹೋರಾಟ ಸಂಘಟನೆಗಳು ಇಲ್ಲಿನ ಕಡಪಾ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಸದ್ಯಕ್ಕೆ ರೈತ ವಿರೋಧಿ ಮೂರು ಕಾನೂನುಗಳನ್ನು ಸರ್ಕಾರ ಜಾರಿಗೆ ತಂದಿದೆ. ಮುಂದಿನ ದಿನಗಳಲ್ಲಿ ವಿದ್ಯುತ್ ಕಾಯ್ದೆ ಹಾಗೂ ಬೀಜದ ಕಾಯ್ದೆಯನ್ನು ತರಲಿದೆ. ಇವುಗಳ ಮೂಲಕ ಕಾರ್ಪೊರೇಟ್ ಕಂಪನಿಗಳಿಗೆ ರೈತರನ್ನು ಜೀತದಾಳುಗಳನ್ನಾಗಿಸಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಿದ್ಧತೆ ನಡೆಸಿದೆ. ಇದರ ವಿರುದ್ಧ 125 ದಿನಗಳಿಂದ ದೆಹಲಿಯ ಹೊರವಲಯದಲ್ಲಿ ಹೋರಾಟ ನಡೆದಿದೆ. ದೇಶದ ಯುವ ಜನತೆ ಈಗ ಎಚ್ಚೆತ್ತುಕೊಳ್ಳದಿದ್ದರೆ ಮುಂದೊಂದು ದಿನ ಜಮೀನು ಕಳೆದುಕೊಂಡು ಪರಿತಪಿಸಬೇಕಾಗಬಹುದು’ ಎಂದು ಎಚ್ಚರಿಸಿದರು.
ಇದನ್ನೂ ಓದಿ :ತಂದೆ-ತಾಯಿ ಆರಾಮಗಿದ್ದಾರೆ. ಆತಂಕ ಪಡುವ ಆಗತ್ಯವಿಲ್ಲ : ಹೆಚ್. ಡಿ ಕುಮಾರಸ್ವಾಮಿ -Vishwanews24
‘ಮಂಡಿ ಹೊರಗೆ ಬೆಳೆಗಳನ್ನು ಮಾರಾಟ ಮಾಡಬಹುದು ಎಂದು ಇವರು ಹೇಳುತ್ತಿದ್ದಾರೆ. ಈಗಾಗಲೇ ಮಧ್ಯಪ್ರದೇಶ ಹಾಗೂ ಇನ್ನಿತರ ಉತ್ತರ ಭಾರತ ರಾಜ್ಯಗಳಲ್ಲಿ ಮಂಡಿ ಹೊರಗೆ ಮಾರಾಟ ಮಾಡಿದ ರೈತರನ್ನು ಕೆಲವರು ವಂಚಿಸಿದ ಉದಾಹರಣೆಗಳಿವೆ. ರೈತರ ಪರ ಕಾನೂನು ಎನ್ನುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಈ ಕುರಿತು ಎಲ್ಲಿಯೂ ಮಾತನ್ನಾಡದಿರುವುದು ಇವರ ಷಡ್ಯಂತ್ರವನ್ನು ತಿಳಿಸುತ್ತದೆ’ ಎಂದರು.
‘2021 ಆಂದೋಲನದ ವರ್ಷವಾಗಿದ್ದು, ಈ ವರ್ಷದ ಅಂತ್ಯದ ವರೆಗೂ ಈ ಹೋರಾಟ ಮುಂದುವರೆಯಲಿದೆ. ನಂತರದ ಹೋರಾಟದ ರೂಪುರೇಷೆ ಕುರಿತು ಮುಂದೆ ತಿಳಿಸಲಾಗುವುದು. ಇದಕ್ಕಾಗಿ ದೆಹಲಿಯ ಹೊರವಲಯದಲ್ಲಿ ಮನೆಗಳು ನಿರ್ಮಾಣವಾಗಿವೆ. ನೀರು, ಶೌಚಾಲಯ, ವಿದ್ಯುತ್ ಪ್ರತಿಯೊಂದರ ವ್ಯವಸ್ಥೆಯೂ ಆಗಿದೆ. ಪ್ರತಿ ಗ್ರಾಮದಿಂದ ಒಂದು ಟ್ರ್ಯಾಕ್ಟರ್‌ನೊಂದಿಗೆ 15 ಜನರು ಹತ್ತು ದಿನಗಳ ಕಾಲ ಈ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಇದೊಂದು ಸುದೀರ್ಘ ಹೋರಾಟವಾಗಿರುವುದರಿಂದ ರೈತರು, ಕಾರ್ಮಿಕರು ಸಜ್ಜಾಗಬೇಕು. ಇಲ್ಲಿ ಜಾತಿ ಹಾಗೂ ಧರ್ಮವನ್ನೂ ಮೀರಿ ರೈತಧರ್ಮವೇ ಶ್ರೇಷ್ಠ ಎಂಬ ಭಾವನೆ ಎಲ್ಲರಲ್ಲೂ ಇರಬೇಕು’ ಎಂದು ಟಿಕಾಯತ್ ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…