ಉಡುಪಿ: ಕಾರ್ಮಿಕ ವರ್ಗದ ಶ್ರಮದ ಫಲವಾಗಿ ಇಂದು ಬೃಹತ್ ಕೈಗಾರಿಕೆಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ದೇಶದ ಆರ್ಥಿಕತೆಗೆ ಶಕ್ತಿ ತುಂಬುತ್ತಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕಾರ್ಮಿಕರ ಏಳಿಗೆಗಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಕಾರ್ಮಿಕ ವರ್ಗದ ಹಿತರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧತೆ ಮೆರೆದಿದೆ.
ಉಡುಪಿ ಕ್ಷೇತ್ರದಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಪ್ರೋತ್ಸಾಹ ನೀಡಿ ಉದ್ಯೋಗ ಸೃಷ್ಟಿಸುವುದಾಗಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಹೇಳಿದರು.
ಮಣಿಪಾಲ ಭಾಗದ ವಿವಿಧ ಗಾರ್ಮೆಂಟ್ಸ್ ಹಾಗೂ ಕೈಗಾರಿಕಾ ಘಟಕಗಳಿಗೆ ಶಾಸಕ ರಘುಪತಿ ಭಟ್ ರವರೊಂದಿಗೆ ಭೇಟಿ ನೀಡಿ ಕಾರ್ಮಿಕರಲ್ಲಿ ಮತ ಯಾಚನೆ ಮಾಡಿದರು.
ಶಾಸಕ ರಘುಪತಿ ಭಟ್ ಮಾತನಾಡಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ರನ್ನು ಗೆಲ್ಲಿಸಿ ಬಿಜೆಪಿ ಸರ್ಕಾರದ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಕೈ ಕೊಡಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯರಾದ ಮಂಜುನಾಥ್ ಮಣಿಪಾಲ್ ,ಕಲ್ಪನಾ ಸುಧಾಮ, ಮಾಜಿ ನಗರಸಭಾ ಸದಸ್ಯ ನರಸಿಂಹ ನಾಯಕ್ ,ಡಾ ಬಾಲಕೃಷ್ಣ ಮದ್ದೋಡಿ, ಸತೀಶ್ ಸಾಲ್ಯಾನ್ ,ಆಲ್ವಿನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…