ಬೆಂಗಳೂರು : ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್ ಗೆ ಕರೆ ನೀಡಿದೆ.
ಜನವರಿ 8 ಹಾಗೂ 9 ರಂದು ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿದೆ. ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಬುಧವಾರ ಸಂಜೆ 5 ಗಂಟೆಯವರಗೆ ಬಂದ್ ನಡೆಯಲಿದೆ.
ಬಂದ್ ದಿನ ಬಿಎಂಟಿಸಿ, ಕೆಎಸ್‌ಆರ್ ಟಿಸಿ ಬಸ್ ಸೇವೆ ಇರಲ್ಲ, ಆಟೋ ಓಲಾ ಕ್ಯಾಬ್ ಕೂಡ ಬಂದ್ ಗೆ ಬೆಂಬಲ ಸೂಚಿಸಿದೆ. ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್ ಇರಲ್ಲ, ಆಟೋ, ಓಲಾ ಮತ್ತು ಜೊತೆಗೆ ಮುಷ್ಕರದಲ್ಲಿ ಬ್ಯಾಂಕ್ ನೌಕರರು ಪಾಲ್ಗೊಳ್ಳಲಿದ್ದು, ಬ್ಯಾಂಕ್ ಸೇವೆಗಳಲ್ಲೂ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಆಸ್ಪತ್ರೆ. ಮೆಡಿಕಲ್. ಶಾಪ್ ಅಂಗಡಿ ಮುಗ್ಗಟ್ಟುಗಳು ಇರುತ್ತದೆ. ಜೊತೆಗೆ ಆಯಂಬುಲೆನ್ಸ್ ಸೇವೆ, ಮೆಟ್ರೋ ಇರಲಿದೆ. ಇನ್ನೂ ಶಾಲೆ ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ಆಯಾಯ ಜಿಲ್ಲಾಧಿಕಾರಿಗಳು ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ಕೆಲ ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ಬಂದ್ ಗೆ ಕೇವಲ ನೈತಿಕ ಬೆಂಬಲ ವ್ಯಕ್ತಪಡಿಸಿದ್ದು, ಕೆಲ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿದ್ದರೂ ಮತ್ತೆ ಕೆಲವು ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಣೆ ಮಾಡಿವೆ. ಟ್ಯಾಕ್ಸಿ ಮತ್ತು ಆಟೋ ಸೇವೆ ಎಂದಿನಂತೆ ಇರಲಿವೆ ಎಂದು ಘೋಷಣೆ ಮಾಡಿವೆ. ಹೀಗಾಗಿ ಆಟೋ ಮತ್ತು ಟ್ಯಾಕ್ಸಿ ಸೇವೆ ಸಂಪೂರ್ಣ ಬಂದ್ ಆಗಿದಿದ್ದರೂ ಸಂಚಾರ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
12 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎಐಟಿಯುಸಿ, ಸಿಐಟಿಯು, ಐಎನ್ ಟಿಯುಸಿ, ಎಲ್ ಪಿಎಫ್ ಕಾರ್ಮಿಕ ಸಂಘಟನೆಗಳು ಜನವರಿ 8 ಹಾಗೂ 9 ರಂದು ಭಾರತ್ ಬಂದ್ ಗೆ ಕರೆ ಕೊಟ್ಟಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…