ಬೆಂಗಳೂರು : ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ ಕೇವಲ ವೇದಿಕೆಯಲ್ಲಿ ಕುಳಿತು ಭಾಷಣ ಮಾಡಿಕೊಂಡು ಹೋಗಿಲ್ಲ. ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಹಾಗೂ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ದೆಹಲಿಯಲ್ಲಿ ಹೇಳಿಕೆ ನೀಡಿದ್ದರ ಬಗ್ಗೆ ಕೇಳಿದಾಗ, ನಾನು ಲೈಫ್ ಟೈಮ್ ಕಾರ್ಯಕರ್ತ. ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕೋ ಎಲ್ಲವನ್ನೂ ಮಾಡಿದ್ದೇನೆ ಎಂದರು.
ದೆಹಲಿಯಲ್ಲಿ ನಡೆಯುವ ಸಿಡಬ್ಲ್ಯೂಸಿ ಸಭೆಗೆ ತಾವು ತೆರಳುವಿರಾ ಎಂದು ಕೇಳಿದಾಗ, ನನ್ನನ್ನು ಕರೆದರೆ ಖಂಡಿತಾ ಹೋಗುತ್ತೇನೆ. ಆದರೆ ಇದುವರೆಗೂ ಕರೆದಿಲ್ಲ ಎಂದರು.
ಖರ್ಗೆ ಅವರ ಜೊತೆ ನಾಯಕತ್ವ ವಿಚಾರವಾಗಿ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ, ಯಾವ ವಿಚಾರವಾಗಿಯೂ ಚರ್ಚೆ ನಡೆಸಿಲ್ಲ. ನಾನು ಚರ್ಚೆ ಮಾಡುವುದೂ ಇಲ್ಲ. ಮಾಡುವ ಅವಶ್ಯಕತೆಯೂ ಇಲ್ಲ. ನಾನು ಮತ್ತು ಸಿದ್ದರಾಮಯ್ಯ ಅವರು ಈಗಾಗಲೇ ಇದರ ಬಗ್ಗೆ ಹೇಳಿದ್ದೇವೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಅವರು ಏನು ಹೇಳುತ್ತಾರೋ ಆ ರೀತಿ ಕೇಳಿಕೊಂಡು ಹೋಗುತ್ತೇವೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…