Featured

ಕಾರ್ಯಕರ್ತರ ರಾಜೀನಾಮೆಯಿಂದ ಅಸಮಾಧಾನ ಅಮಿತ್ ಶಾ ಅಸಮಾಧಾನ – Vishwanews24

ಕಾರ್ಯಕರ್ತರ ರಾಜೀನಾಮೆಯಿಂದ ಅಸಮಾಧಾನ ಅಮಿತ್ ಶಾ ಅಸಮಾಧಾನ ..

ಕಾರ್ಯಕರ್ತರೆ ಪಕ್ಷದ ಜೀವಾಳ, ಕಾರ್ಯರ್ತರ ಭಾವನೆಗಳಿಗೆ ನೋವಾಗದಂತೆ ಕ್ರಮ ಕೈಗೊಳ್ಳಿ..

ರಾಜೀನಾಮೆ ನೀಡಿರುವವರ ಮನವೊಲಿಸಿ, ಪಕ್ಷಕ್ಕೆ ವಾಪಸ್ ಕರೆ ತನ್ನಿ..

ಸಿಎಂಗೆ ಅಮಿತ್ ಶಾ  ಖಡಕ್ ಸೂಚನೆ ..

ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಸಚಿವಅಮಿತ್ ಶಾ  ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಗರಂ ಆಗಿದ್ದಾರೆ ಅಂತ ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡದ  ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ, ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ಆನಂತರದ ಬೆಳವಣಿಗೆಗಳು ಇತ್ಯಾದಿಗಳ ಬಗ್ಗೆ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಅಮಿತ್ ಶಾ ಅವರನ್ನು ಸಮಾಧಾನಿಸಲು ಸಿಎಂ ಯತ್ನಿಸಿದ್ದಾರೆ. ಆದರೆ ಇದಕ್ಕೆ ಸಮಾಧಾನಗೊಳ್ಳದ ಅಮಿತ್ ಶಾ, ಇದು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ. ಅಮಿತ್ ಶಾ ಅವರನ್ನು ಭೇಟಿಯಾದ ಬಸವರಾಜ ಬೊಮ್ಮಾಯಿ, ಸುಮಾರು 20 ನಿಮಿಷಗಳ ಕಾಲ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಅಮಿತ್ ಶಾ ಜೊತೆ ಸುಮಾರು 20 ನಿಮಿಷಗಳ ಕಾಲ ಮಹತ್ವದ ಮಾತುಕತೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಹಾಗೂ ನಂತರದ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಇದೇ ಮೊದಲ ಬಾರಿಗೆ ಪಕ್ಷಕ್ಕೆ ಮುಜುಗರ ಆಗಿದೆ. ಈ ಹಿಂದೆ ಯಾವತ್ತು ಇಂತಹ ಪರಿಸ್ಥಿತಿ ಬಂದಿರಲಿಲ್ಲ. ಇದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಯಿತು. ಇದರಿಂದ ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಆಯಿತು ಅಂತ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೂಡಲೇ ಕಾರ್ಯಕರ್ತರ ವಿಶ್ಚಾಸಗಳಿಸಲು ನೀವು ಕ್ರಮಕೈಗೊಳ್ಳಬೇಕಿತ್ತು ಅಂತ ಅಮಿತ್ ಶಾ ಹೇಳಿದ್ರು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥನೆಗೆ ಮುಂದಾದ್ರು. ತಾವು ಕೈಗೊಂಡ ಕ್ರಮಗಳ ಬಗ್ಗೆ ಹೇಳಿದ್ರು. ಇದಕ್ಕೆ ಒಪ್ಪದ ಅಮಿತ್ ಶಾ, ಇಡೀ ಪ್ರಕರಣವನ್ನು ನೀವು ನಿರ್ವಹಿಸಿದ ರೀತಿ ಪ್ರತಿಪಕ್ಷಗಳಿಗೆ ಆಹಾರವಾಗಿದೆ. ಇದು ಪುನರಾವರ್ತನೆ ಆಗದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಕಾರ್ಯಕರ್ತರೆ ಪಕ್ಷದ ಜೀವಾಳ, ಕಾರ್ಯರ್ತರ ಭಾವನೆಗಳಿಗೆ ನೋವಾಗದಂತೆ ಕ್ರಮಗಳನ್ನು ಕೈಗೊಳ್ಳಿ ಎಂದಿದ್ದಾರೆ. ಇನ್ನು ಮುಂದೆ ರಾಜೀನಾಮೆ ನೀಡಿರುವವರ ಮನವೊಲಿಸಿ, ಪಕ್ಷಕ್ಕೆ ವಾಪಸ್ ಕರೆ ತನ್ನಿ ಅಂತ ಸಿಎಂಗೆ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

3 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

4 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

4 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

5 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

8 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

8 hours ago