ಉಡುಪಿ: ಕಾಲಿಗೆ ಮೊಬೈಲ್ ಕಟ್ಟಿಕೊಂಡು ಲುಂಗಿ ತೊಟ್ಟು, ಕೇಸರಿ ಶಾಲು ಹಾಕಿಕೊಂಡು ತಾನು ಏಜೆಂಟ್ ಅಂತ ಮತ ಎಣಿಕೆ ಕೇಂದ್ರಕ್ಕೆ ಬಂದಿದ್ದ ಯುವಕನನ್ನು ಪೊಲೀಸರು ತಡೆದು ವಾಪಸ್ ಕಳುಹಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ವಿಧಾನಸಭೆ ಚನಾವಣೆಯ ಫಲಿತಾಂಶ ಆರಂಭವಾಗಿದೆ. ಫಲಿತಾಂಶದ ಹಿನ್ನೆಲೆಯಲ್ಲಿ ಏಜೆಂಟರ್‌ಗಳು ಮತಕೇಂದ್ರಗಳತ್ತ ಬಂದಿದ್ದರು. ಈ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರದ ಏಜೆಂಟ್ ಎಂದು ಯುವಕನೊಬ್ಬ ಮತಕೇಂದ್ರಕ್ಕೆ ಬಂದಿದ್ದ. ಯುವಕನೊಬ್ಬ ಕಾಲಿಗೆ ಮೊಬೈಲ್ ಕಟ್ಟಿಕೊಂಡು ಲುಂಗಿ ತೊಟ್ಟು ಮತ ಎಣಿಕಾ ಕೇಂದ್ರಕ್ಕೆ ಬಂದಿದ್ದಾನೆ. ಜೊತೆಗೆ ಈತ ಕೇಸರಿ ಶಾಲು ಹಾಕಿದ್ದ.
ಈ ವೇಳೆ ತಪಾಸಣೆ ನಡೆಸಿದ್ದ ಪೊಲೀಸರಿಗೆ ಆತನ ಬಳಿಯಲ್ಲಿ ಮೊಬೈಲ್ ಇರುವುದು ತಿಳಿದಿದೆ. ಈ ಹಿನ್ನೆಲೆಯಲ್ಲಿ ಸದಾಶಿವ ಕಂಚಿಕೋಡು ಎಣಿಕಾ ಕೇಂದ್ರದ ದ್ವಾರದಲ್ಲೇ ಏಜೆಂಟ್‌ನನ್ನು ಪೊಲೀಸರು ತಡೆಹಿಡಿದು ವಾಪಸ್ ಕಳಿಸಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…