ಬೆಂಗಳೂರು: ಕಾಲೇಜಿಗೆ ದ್ವಿಚಕ್ರ ವಾಹನ ಹಾಗೂ ಕಾರಿನಲ್ಲಿಹೋಗುವ ಮಂದಿಗೆ ಕಡಿವಾಣ ಹಾಕುವುದಕ್ಕೆ ರಾಜ್ಯ ಸರಕಾರ ಮುಂದಾಗಿದ್ದು, ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಪ್ರಕಟಣೆಯನ್ನು ರಾಜ್ಯ ಸರಕಾರ ಹೊರಡಿಸಲಿದೆ ಎನ್ನಲಾಗಿದೆ.
ಉನ್ನತ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ನಿರ್ಬಂಧಿಸಲು ,ಸಾರ್ವಜನಿಕ ಸಾರಿಗೆ ಉತ್ತೇಜಿಸಿ, ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಈ ಪ್ರಸ್ತಾವನೆ ಸಿದ್ಧಪಡಿಸುತ್ತಿದೆ.
ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಜಿ.ಟಿ.ದೇವೇಗೌಡ ಅವರು ಕಾಲೇಜಿನ ಕ್ಯಾಂಪಸ್ ಒಳಗೆ ವಿದ್ಯಾರ್ಥಿಗಳ ವಾಹನ ನಿಷೇಧಿಸುವ ಬಗ್ಗೆ ಕಾಲೇಜು ಮಂಡಳಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆ ಇದ್ದು ಈ ಸಭೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು, ಖಾಸಗಿ ಮತ್ತು ಡೀಮ್ಡ್ ವಿ.ವಿ ಪ್ರತಿನಿಧಿಗಳು, ವೃತ್ತಿಪರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಪೋಷಕರ ಸಭೆಗಳನ್ನು ನಡೆಸಲು ಮುಂದಾಗಿದ್ದು, ಸಭೆ ನಡೆದ ಬಳಿಕ ವಾಹನಗಳ ನಿಷೇಧದ ಬಗ್ಗೆ ಘೋಷಣೆ ಮಾಡಲಾಗುವುದು ಎನ್ನಲಾಗಿದೆ.
ವಿದ್ಯಾರ್ಥಿಗಳ ವಾಹನಗಳು ಅಪಘಾತಗಳಾಗುತ್ತಿರುವ ಹಿನ್ನೆಲೆಯಲ್ಲಿ ಕಾಲೇಜಿನ ಕ್ಯಾಂಪಸ್ ಒಳಗಡೆ ದ್ವಿಚಕ್ರ ಮತ್ತು ಕಾರುಗಳನ್ನು ನಿರ್ಬಂಧಿಸಲು ಇಲಾಖೆ ಚಿಂತನೆ ನಡೆಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…