ಪುತ್ತೂರು: ಕಾಲೇಜು ಮತ್ತು ಕಾಲೇಜಿನ ಸುತ್ತಮುತ್ತಲಿನ ಅಂಗಡಿಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಸಿಕ್ಕರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತರಾದ ಎಚ್.ಕೆ. ಕೃಷ್ಣಮೂರ್ತಿ ಎಚ್ಚರಿಕೆ ನೀಡಿದ್ದಾರೆ.
ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ವಿರುದ್ಧ ವಿಶೇಷ ಜಾಗೃತಿ ಅಭಿಯಾನ ಆರಂಭವಾಗಿದೆ. ಎಚ್ಚರಿಕೆ ನೀಡುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮೊದಲ ಹಂತದಲ್ಲಿ ಅನಿರೀಕ್ಷಿತ ದಾಳಿ ನಡೆಸಲಾಗುತ್ತಿದೆ. ಮೊದಲ ಹಂತದ ದಾಳಿಯಲ್ಲಿ ಎಚ್ಚರಿಕೆ ನೀಡುವ ಕ್ರಮ ಮಾತ್ರ ಕೈಗೊಳ್ಳಲಾಗುತ್ತದೆ. ಎರಡನೇ ಹಂತದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ
ಮುಂದಿನ ಹಂತದ ದಾಳಿ ವೇಳೆ ಅಂಗಡಿಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಕೈಯಲ್ಲಿ ಮೊಬೈಲ್ ಸಿಕ್ಕಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಶಾಲಾ ಕಾಲೇಜುಗಳಿಗೆ ಭೇಟಿ ನೀಡಲು ಅಧಿಕಾರಿಯೊಬ್ಬರನ್ನು ಶೀಘ್ರ ನೇಮಕ ಮಾಡಲಾಗುವುದು. ಇದಲ್ಲದೆ ಶಾಲಾ ಕಾಲೇಜುಗಳಲ್ಲಿ ಸಮಾಲೋಚನಾ ಸಮಿತಿ ರಚನೆ ನಡೆಯುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಬಹುತೇಕ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿಯೂ ಸಿಸಿ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಆದರೆ ಇಲ್ಲಿ ಅನುದಾನದ ಲಭ್ಯತೆ ನೋಡಿಕೊಂಡು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…