ತುಮಕೂರು : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ಹತ್ಯೆ ಪ್ರಕರಣದಲ್ಲಿ ಯಾವ ಲವ್ ಜಿಹಾದ್ ಕಾಣ್ತಿಲ್ಲ. ಅದೊಂದು ಲವ್ ಕೇಸ್, ಇಬ್ಬರ ನಡುವೆ ಲವ್ ಆಗಿ, ಬಳಿಕ ಯುವತಿ ದೂರ ಹೋಗಲು ಶುರು ಮಾಡಿದ್ದಕ್ಕೆ ಹತ್ಯೆಯಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲವ್ ಜಿಹಾದ್ ಆರೋಪಕ್ಕೆ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿ ಯುವತಿಯ ಹತ್ಯೆ ಘಟನೆ ಲವ್ ಜಿಹಾದ್ ಎಂದು ಪ್ರಹ್ಲಾದ್ ಜೋಶಿ ಹೇಳಿಕೆಗೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ವಿದ್ಯಾರ್ಥಿನಿಯ ಹತ್ಯೆಯು ಪ್ರೀತಿಯ ನಿರಾಕರಣೆಯಿಂದಾಗಿ ನಡೆದಿದೆ. ಇಬ್ಬರ ನಡುವೆ ಪರಸ್ಪರ ಪ್ರೀತಿ ಉಂಟಾಗಿ, ನಂತರ ಆ ಹೆಣ್ಣುಮಗಳು ದೂರ ಹೋಗಲು ಶುರು ಮಾಡಿದ್ದಾಳೆ. ಬಳಿಕ ಆ ಹುಡುಗ ಯುವತಿಗೆ ಚುಚ್ಚಿದ್ದಾನೆ. ಅದರಲ್ಲಿ ಲವ್ ಜಿಹಾದ್ ಕಾಣುತ್ತಿಲ್ಲ. ಇದೊಂದು ಪ್ರೇಮ ಪ್ರಕರಣವಾಗಿ ಕಾಣುತ್ತಿದೆ ಎಂದು ತಿಳಿಸಿದರು.
ಇನ್ನು, ನನಗೆ ಆ ಘಟನೆಯ ಪೂರ್ತಿ ಮಾಹಿತಿ ಗೊತ್ತಿಲ್ಲ. ಪರಸ್ಪರ ಪ್ರೀತಿ ಮೇಲೆ ಆಗಿರುವ ಘಟನೆ ಇದು. ಬಿಜೆಪಿಯವರು ಸ್ವಾಭಾವಿಕವಾಗಿ ಇಂಥಹ ವಿಚಾರದಲ್ಲಿ ಕಾಂಗ್ರೆಸನ್ನು ದೂಷಣೆ ಮಾಡೋದು ಅವರ ಕೆಲಸ ಎಂದ ಅವರು, ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರನ್ನು ನಾವು ಯಾರೂ ರಕ್ಷಣೆ ಮಾಡುವುದಿಲ್ಲ. ರಾಜ್ಯದ ಜನತೆಗೆ ಗೃಹ ಸಚಿವನಾಗಿ ಭರವಸೆ ಕೊಡುತ್ತಿದ್ದೇನೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ರಕ್ಷಣೆ ಮಾಡುವಂತಹ ಪ್ರಮೇಯವೇ ಇಲ್ಲ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…