ಕೋಲಾರ: ಕೋಲಾರದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಈಗಷ್ಟೇ ಹದಿ ಹರೆಯದ ವಯಸ್ಸಿಗೆ ಕಾಲಿಟ್ಟ ಬಾಲಕಿ ಪ್ರೌಢಶಾಲೆಗೆ ಹೋಗುವಾಗಲೇ ಆಕೆಯ ಮನಸ್ಸು ಕೆಡಿಸಿದ್ದ ಯುವಕ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇನ್ನು ಯುವತಿ ಇತ್ತೀಚೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಉತ್ತೀರ್ಣಳಾಗಿ ಪಿಯು ಕಾಲೇಜು ಸೇರಿದ್ದಾಳೆ.
ಆದರೆ, ಕಾಲೇಜಿನ ಶೌಚಗೃಹದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.
ಪ್ರೌಢಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿದ ಅನಾಮಿಕ ವ್ಯಕ್ತಿ ಆಕೆಯನ್ನು ಲೈಂಗಿಕವಾಗಿಯೂ ಬಳಕೆ ಮಾಡಿಕೊಂಡಿದ್ದಾರೆ. ನಿರಂತರ ಅತ್ಯಾಚಾರ ಮಾಡಿದ ಪರಿಣಾಮ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆ. ಆದರೆ, ಬಾಲಕಿ ಗರ್ಭಿಣಿ ಆಗಿದ್ದರೂ ಈ ವಿಚಾರ ಹೆರಿಗೆ ಆಗುವವರೆಗೂ ಮನೆಯವರಿಗೆ ಗೊತ್ತಾಗದೇ ಹೇಗೆ ಗುಟ್ಟಾಗಿ ಕಾಪಾಡಿಕೊಳ್ಳಲಾಗಿತ್ತು ಎಂಬುದು ಆಶ್ಚರ್ಯಕ್ಕೆ ಒಳಗಾದ ವಿಚಾರವಾಗಿದೆ.
ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಸೇರಿದ್ದ ವಿದ್ಯಾರ್ಥಿನಿ ಹೊಟ್ಟೆ ನೋವೆಂದು ಶೌಚಾಲಯಕ್ಕೆ ತೆರಳಿದ್ದಾಳೆ. ಅಲ್ಲಿಗೆ ಹೋದ ಬಳಿಕ ಹೆರಿಗೆ ನೋವು ಕಾಣಿಸಿಕೊಂಡು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ಕೂಡಲೇ ವಿಚಾರ ತಿಳಿದು ಸ್ಥಳಕ್ಕೆ ಬಂದ ಕಾಲೇಜಿನ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಈ ವಿಚಾರವನ್ನು ಪೊಲೀಸರಿಗೆ ತಿಳಿಸಲಾಗಿದೆ.
ಅಪ್ತಾಪ್ತ ಬಾಲಕಿಯ ತಲೆಕೆಡಿಸಿ ಗರ್ಭಿಣಿ ಮಾಡಿದವನಿಗಾಗಿ ಹುಡುಕಾಟ ನಡೆಯುತ್ತಿದೆ. ಶೀಘ್ರದಲ್ಲೇ ಅತ್ಯಾಚಾರ ಮಾಡಿದ ಯುವಕನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…