Featured

ಕಾಲೇಜು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಪ್ರಥಮ ಪಿಯುಸಿ ವಿದ್ಯಾರ್ಥಿನಿ – vishwanews24

ಕಾಲೇಜು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ; ಕೋಲಾರದಲ್ಲಿ ಅಮಾನವೀಯ ಘಟನೆ

ಕೋಲಾರ: ಕೋಲಾರದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಈಗಷ್ಟೇ ಹದಿ ಹರೆಯದ ವಯಸ್ಸಿಗೆ ಕಾಲಿಟ್ಟ ಬಾಲಕಿ ಪ್ರೌಢಶಾಲೆಗೆ ಹೋಗುವಾಗಲೇ ಆಕೆಯ ಮನಸ್ಸು ಕೆಡಿಸಿದ್ದ ಯುವಕ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇನ್ನು ಯುವತಿ ಇತ್ತೀಚೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಉತ್ತೀರ್ಣಳಾಗಿ ಪಿಯು ಕಾಲೇಜು ಸೇರಿದ್ದಾಳೆ.

ಆದರೆ, ಕಾಲೇಜಿನ ಶೌಚಗೃಹದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

ಪ್ರೌಢಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿದ ಅನಾಮಿಕ ವ್ಯಕ್ತಿ ಆಕೆಯನ್ನು ಲೈಂಗಿಕವಾಗಿಯೂ ಬಳಕೆ ಮಾಡಿಕೊಂಡಿದ್ದಾರೆ. ನಿರಂತರ ಅತ್ಯಾಚಾರ ಮಾಡಿದ ಪರಿಣಾಮ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆ. ಆದರೆ, ಬಾಲಕಿ ಗರ್ಭಿಣಿ ಆಗಿದ್ದರೂ ಈ ವಿಚಾರ ಹೆರಿಗೆ ಆಗುವವರೆಗೂ ಮನೆಯವರಿಗೆ ಗೊತ್ತಾಗದೇ ಹೇಗೆ ಗುಟ್ಟಾಗಿ ಕಾಪಾಡಿಕೊಳ್ಳಲಾಗಿತ್ತು ಎಂಬುದು ಆಶ್ಚರ್ಯಕ್ಕೆ ಒಳಗಾದ ವಿಚಾರವಾಗಿದೆ.

ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಸೇರಿದ್ದ ವಿದ್ಯಾರ್ಥಿನಿ ಹೊಟ್ಟೆ ನೋವೆಂದು ಶೌಚಾಲಯಕ್ಕೆ ತೆರಳಿದ್ದಾಳೆ. ಅಲ್ಲಿಗೆ ಹೋದ ಬಳಿಕ ಹೆರಿಗೆ ನೋವು ಕಾಣಿಸಿಕೊಂಡು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ಕೂಡಲೇ ವಿಚಾರ ತಿಳಿದು ಸ್ಥಳಕ್ಕೆ ಬಂದ ಕಾಲೇಜಿನ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಈ ವಿಚಾರವನ್ನು ಪೊಲೀಸರಿಗೆ ತಿಳಿಸಲಾಗಿದೆ.

ಅಪ್ತಾಪ್ತ ಬಾಲಕಿಯ ತಲೆಕೆಡಿಸಿ ಗರ್ಭಿಣಿ ಮಾಡಿದವನಿಗಾಗಿ ಹುಡುಕಾಟ ನಡೆಯುತ್ತಿದೆ. ಶೀಘ್ರದಲ್ಲೇ ಅತ್ಯಾಚಾರ ಮಾಡಿದ ಯುವಕನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

Vishwa News 24

Recent Posts

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

2 minutes ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

9 minutes ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

43 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

47 minutes ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago