ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಂಪಲ್ಲಿ ಕೋರ್ಟ್ನಲ್ಲಿ ಈ ಅರ್ಜಿಯ ವಿಚಾರಣೆಯೂ ನಡೆದಿದೆ. ಇಂದು (ಜನವರಿ 03) ನ್ಯಾಯಾಧೀಶರ ಆದೇಶ ಹೊರಬಿದ್ದಿದ್ದು, ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ಜಾಮೀನು ದೊರೆತಿದೆ.
ಡಿಸೆಂಬರ್ 04 ರಂದು ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದಾಗ ನಡೆದ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ಮೃತಪಟ್ಟಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡು ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಮೃತ ಮಹಿಳೆಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್ ಸೇರಿದಂತೆ ಸಂಧ್ಯಾ ಚಿತ್ರಮಂದಿರ ಮಾಲೀಕ ಹಾಗೂ ಮ್ಯಾನೇಜರ್ ಅನ್ನು ಬಂಧಿಸಿದ್ದರು.
ಅಲ್ಲು ಅರ್ಜುನ್ಗೆ ಈಗ ಷರತ್ತು ಬದ್ಧ ಜಾಮೀನು ಮಂಜೂರಾಗಿದ್ದು, ಜಾಮೀನು ನೀಡಿರುವ ನಾಂಪಲ್ಲಿ ನ್ಯಾಯಾಲಯ, 1 ಲಕ್ಷ ರೂಪಾಯಿ ಭದ್ರತಾ ಮೊತ್ತ ಮತ್ತು ಇಬ್ಬರು ವ್ಯಕ್ತಿಗಳ ಶೂರಿಟಿಯನ್ನು ಕೇಳಿದೆ. ವಿದೇಶ ಪ್ರಯಾಣದ ಮೇಲೆ ಯಾವುದೇ ನಿರ್ಭಂಧ ವಿಧಿಸಿಲ್ಲ ಎನ್ನಲಾಗುತ್ತಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…