Featured

ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳತ್ತ ಅಂತರರಾಷ್ಟ್ರೀಯ ಸಮುದಾಯ ಗಮನಹರಿಸಬೇಕು : ಇಮ್ರಾನ್‌ ಖಾನ್‌ -Vishwanews24

ಇಸ್ಲಾಮಾಬಾದ್‌: ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳತ್ತ ಅಂತರರಾಷ್ಟ್ರೀಯ ಸಮುದಾಯ ಗಮನಹರಿಸಬೇಕು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿದ್ದಾರೆ.

ಕಾಶ್ಮೀರದಲ್ಲಿ ಭಾರತದ ಕ್ರಮವನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯಲಿವೆ. ಪ್ರತಿಭಟನೆ ನಡೆಸುವವರ ಮೇಲೆ ಭಾರತವು ದಾಳಿ ನಡೆಸಬಹುದು. ಇದು ಭಾರತ– ಪಾಕ್‌ ಮಧ್ಯೆ ಉದ್ವಿಗ್ನ ಸ್ಥಿತಿ ನಿರ್ಮಾಣಕ್ಕೆ ಕಾರಣವಾಗಬಹುದು. ಹೀಗಾದಾಗ ಪುಲ್ವಾಮಾ ಮಾದರಿಯ ಘಟನೆಗಳು ನಡೆದೇ ನಡೆಯುತ್ತವೆ. ಭಾರತವು ಅದರ ಆರೋಪವನ್ನು ನಮ್ಮ ಮೇಲೆ ಹೊರಿಸಿ ನಮ್ಮ ಮೇಲೆ ದಾಳಿ ನಡೆಸಬಹುದು. ಪ್ರತ್ಯುತ್ತರವಾಗಿ ನಾವೂ ದಾಳಿ ನಡೆಸಬೇಕಾಗುತ್ತದೆ ಎಂದು ಹೇಳಿದರು.

ಜಮ್ಮು ಕಾಶ್ಮೀರ ವಿಚಾರವಾಗಿ ಅಧಿವೇಶನದಲ್ಲಿ ಮಾತನಾಡಿದ ಅವರು, ಜಮ್ಮು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ್ದರಿಂದ ಪುಲ್ವಾಮಾ ಮಾದರಿಯ ದಾಳಿ ನಡೆದು, ಭಾರತ– ಪಾಕಿಸ್ತಾನದ ಮಧ್ಯೆ ಪೂರ್ಣಪ್ರಮಾಣದ ಯುದ್ಧ ನಡೆಯುವ ಸಂಭವ ಇದೆ. ಈ ಯುದ್ಧದಲ್ಲಿ ಯಾರೂ ಗೆಲ್ಲಲಾರರು ಆದರೆ ಅದರ ಪರಿಣಾಮ ಜಾಗತಿಕ ಮಟ್ಟದಲ್ಲಿ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮೋದಿ ಅವರು ಮುಸ್ಲಿಂ ವಿರೋಧಿ ಕಾರ್ಯಸೂಚಿ ಜಾರಿ ಮಾಡುವ ಮೂಲಕ ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದ್ದಾರೆ. ಜಗತ್ತು ಈ ಕೂಡಲೇ ಭಾರತದ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ತಾವೇ ರಚಿಸಿದ ಕಾನೂನಿಗೆ ಗೌರವ ಕೊಡದೆ ಸುಮ್ಮನೆ ಕುಳಿತರೆ ಮುಂದೆ ಸಂಭವಿಸುವ ಬೆಳವಣಿಗೆಗಳಿಗೆ ನಾವು ಜವಾಬ್ದಾರರಾಗಿರುವುದಿಲ್ಲ. ಎರಡು ಅಣ್ವಸ್ತ್ರ ರಾಷ್ಟ್ರಗಳ ಮಧ್ಯೆ ನಡೆಯುವ ಯುದ್ಧದಲ್ಲಿ ಯಾರೂ ಗೆಲ್ಲಲಾರರು. ಆದರೆ ಪರಿಣಾಮ ಮಾತ್ರ ಜಾಗತಿಕ ಮಟ್ಟದಲ್ಲಾಗುವುದು. ನನ್ನ ಮಾತುಗಳನ್ನು ಅಣ್ವಸ್ತ್ರ ಬ್ಲ್ಯಾಕ್‌ಮೇಲ್ ಅಂತಾ ತಿಳಿಯಬಾರದು ಎಂದು ಹೇಳಿದರು.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

20 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 day ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 day ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago