ಉಡುಪಿ: ಕಾಶ್ಮೀರದಲ್ಲಿ ಭಯೋತ್ಪಾದಕರ ಅಟ್ಟಹಾಸ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 326 ಕಿಲೋಮೀಟರ್ ಗೂ ಅಧಿಕ ಕರಾವಳಿ ತೀರ ಇದ್ದು ಕರಾವಳಿ ಮೂಲಕ ಭಯೋತ್ಪಾದಕ ಚಟುವಟಿಕೆ ಸಾಧ್ಯತೆ ಹಿನ್ನಲೆಯಲ್ಲಿ ಕಣ್ಗಾವಲು ಇರಿಸಲಾಗಿದೆ.
ಕರಾವಳಿ ಕಾವಲು ಪಡೆಯ 13 ಬೊಟ್ ಗಳು ಸದ್ಯ ಪೆಟ್ರೋಲಿಂಗ್ ನಡೆಸುತ್ತಿವೆ. ಕಡಲತೀರ ಪ್ರದೇಶದಲ್ಲಿ ಒಟ್ಟು 9 ಕರಾವಳಿ ಕಾವಲು ಪಡೆ ಠಾಣೆಗಳಿವೆ.ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪಡೆ, ಗುಪ್ತಚರ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದು ಜಂಟಿ ಕಾರ್ಯಾಚರಣೆ ನಡೆಸಿದೆ.
ಭದ್ರತೆಯ ದೃಷ್ಟಿಯಿಂದ ಆಳ ಸಮುದ್ರ ಮೀನುಗಾರರಿಗೂ ಮಾಹಿತಿ ನೀಡಲಾಗಿದ್ದು ಕಡಲಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಓಡಾಟ ಕಂಡು ಬಂದರೆ, ತಕ್ಷಣ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.ಅರಬ್ಬಿ ಸಮುದ್ರ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು ಯಾವುದೇ ವಿದೇಶಿ ಬೋಟುಗಳು, ವಿದೇಶಿ ವ್ಯಕ್ತಿಗಳು ಕಂಡು ಬಂದರೆ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…