ಕಾಶ್ಮೀರಿ ನಾಯಕರನ್ನು ಗೃಹ ಬಂಧನದಲ್ಲಿಟ್ಟು, ಭಯದ ವಾತಾವರಣ ನಿರ್ಮಿಸಲಾಗಿದೆ : ದಿನೇಶ್‍ ಗುಂಡೂರಾವ್ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂ ಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ವಿರೋಧ ವ್ಯಕ್ತಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಅತ್ಯಂತ ಸೂಕ್ಷ್ಮ ವಿಚಾರ. ದಬ್ಬಾಳಿಕೆ ಮಾಡಿ, ಎಲ್ಲಾ ಸಂಪರ್ಕಗಳನ್ನು ಸ್ಥಗಿತ ಮಾಡಿ, ನಾಯಕರನ್ನು ಗೃಹ ಬಂಧನದಲ್ಲಿಟ್ಟು, ಭಯದ ವಾತಾವರಣ ನಿರ್ಮಿಸಲಾಗಿದೆ. 30 ಸಾವಿರ ಸೈನಿಕರನ್ನು ನೇಮಿಸಲಾಗಿದೆ.

ಆ ಭಾಗವನ್ನು ಅತಿಕ್ರಮಣ ಮಾಡಿಕೊಂಡ ರೀತಿಯಲ್ಲಿ ವರ್ತಿಸಲಾಗಿದೆ. ಕೇಂದ್ರ ಸರ್ಕಾರ ತನ್ನೆಲ್ಲಾ ಶಕ್ತಿಯನ್ನು ಬಳಸಿಕೊಂಡು ದುಸ್ಸಾಹಸ ಮಾಡಿ ಆ ರಾಜ್ಯದ ಜನರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ.ಎಂದು ದಿನೇಶ್‍ಗುಂಡೂರಾವ್ ಹೇಳಿದರು.