Featured

ಕಾಶ್ಮೀರ: ಗುಂಡಿನ ದಾಳಿ ವೇಳೆ ಗಾಯಗೊಂಡ ಪಾಕ್ ಉಗ್ರನಿಗೆ ರಕ್ತದಾನ ಮಾಡಿ ಜೀವ ಉಳಿಸಿದ ಭಾರತೀಯ ಸೈನಿಕರು – Vishwanews24

ಕಾಶ್ಮೀರ: ಗುಂಡಿನ ದಾಳಿ ವೇಳೆ ಗಾಯಗೊಂಡ ಪಾಕ್ ಉಗ್ರನಿಗೆ ರಕ್ತದಾನ ಮಾಡಿ ಜೀವ ಉಳಿಸಿದ ಭಾರತೀಯ ಸೈನಿಕರು

ಕಾಶ್ಮೀರ: ಕೆಲವು ದಿನಗಳಿಂದ ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ಪೋಸ್ಟ್ ಮೇಲೆ ದಾಳಿ ಮಾಡುವ ಪ್ರಯತ್ನ ಮಾಡುತ್ತಿದ್ದ ಭಯೋತ್ಪಾದಕನ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸುವ ಮೂಲಕ ಸೆರೆಹಿಡಿದಿದೆ. ಗಾಯಗೊಂಡ ಉಗ್ರನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನಿಗೆ ಭಾರತೀಯ ಸೈನಿಕರು ‘ಮೂರು ಬಾಟಲಿ ರಕ್ತ ದಾನ’ ಮಾಡಿದ್ದಾರೆ ಎಂದು ಸೇನೆಯು ಬುಧವಾರ ತಿಳಿಸಿದೆ.

ಭಯೋತ್ಪಾದಕನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಕೋಟ್ಲಿ ಜಿಲ್ಲೆಯ ಸಬ್ಜ್ಕೋಟ್ ಗ್ರಾಮದ ನಿವಾಸಿ ತಬಾರಕ್ ಹುಸೇನ್ (32) ಎಂದು ಗುರುತಿಸಲಾಗಿದೆ.

ಘಟನೆಯ ವಿವರಗಳನ್ನು ನೀಡಿದ ನೌಶೇರಾ ಬ್ರಿಗೇಡ್‌ನ ಕಮಾಂಡರ್ ಬ್ರಿಗೇಡಿಯರ್ ಕಪಿಲ್ ರಾಣಾ, ʻಆಗಸ್ಟ್ 21 ರಂದು ನೌಶೇರಾದ ಜಂಗಾರ್ ಸೆಕ್ಟರ್‌ನಲ್ಲಿ ನಿಯೋಜಿಸಲಾದ ಸೈನಿಕರು ಭಾರತದ ಗಡಿ ನಿಯಂತ್ರಣ ರೇಖೆಯ ಭಾಗದಲ್ಲಿ ಎರಡ್ಮೂರು ಭಯೋತ್ಪಾದಕರನ್ನು ಗುರುತಿಸಿದ್ದಾರೆ. ಒಬ್ಬ ಭಯೋತ್ಪಾದಕ ಭಾರತೀಯ ಪೋಸ್ಟ್‌ನ ಸಮೀಪಕ್ಕೆ ಬಂದು ಬೇಲಿಯನ್ನು ದಾಟಲು ಪ್ರಯತ್ನಿಸುತ್ತಿದ್ದನು. ಈ ವೇಳೆ ಎಚ್ಚೆತ್ತುಕೊಂಡ ಸೇನೆ ಗುಂಡಿನ ದಾಳಿ ನಡೆಸಿ, ಉಗ್ರನನ್ನು ಸೆರೆಹಿಡಿದಿದೆ. ಈ ವೇಳೆ ಉಗ್ರನ ತೊಡೆ ಮತ್ತು ಭುಜಕ್ಕೆ ಗುಂಡು ತಗುಲಿದ್ದು, ತೀವ್ರ ರಕ್ತಸ್ರಾವವಾಗಿತ್ತು. ಹೀಗಾಗಿ, ಅವನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಉಗ್ರ ಗಾಯಗೊಂಡು ತೀವ್ರ ರಕ್ತಸ್ರಾವಾಗಿದ್ದರಿಂದ ಆತನಿಗೆ ರಕ್ತದ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದರು. ವಿಷಯ ತಿಳಿದ ನಮ್ಮ ತಂಡದ ʻಸೈನಿಕರು ಉಗ್ರನಿಗೆ ಮೂರು ಬಾಟಲಿ ರಕ್ತ ನೀಡಿದ್ದಾರೆʼ. ನಂತ್ರ, ಆತನಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದು, ಇದೀಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿಸಿದ್ದಾರೆ.

ʻನನನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಕರ್ನಲ್ ಯೂನಸ್ ಚೌಧರಿ ಕಳುಹಿಸಿದ್ದಾರೆʼ ಎಂದು ವಿಚಾರಣೆ ವೇಳೆ ಉಗ್ರ ತಬಾರಕ್ ಹುಸೇನ್ ಬಹಿರಂಗಪಡಿಸಿದ್ದಾನೆ. ಈ ಕೃತ್ಯಕ್ಕೆ ಕರ್ನಲ್ 30,000 ರೂ. ನೀಡಿದ್ದಾನೆ ಎಂದು ಭಯೋತ್ಪಾದಕ ತಿಳಿಸಿದ್ದಾನೆ.

ಜಿಲ್ಲಾ ರಜತ ಮಹೋತ್ಸವ : ಉಡುಪಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

27 minutes ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 hour ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 hour ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 hour ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 hour ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

21 hours ago