ಕಾಶ್ಮೀರ: ಕೆಲವು ದಿನಗಳಿಂದ ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ಪೋಸ್ಟ್ ಮೇಲೆ ದಾಳಿ ಮಾಡುವ ಪ್ರಯತ್ನ ಮಾಡುತ್ತಿದ್ದ ಭಯೋತ್ಪಾದಕನ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸುವ ಮೂಲಕ ಸೆರೆಹಿಡಿದಿದೆ. ಗಾಯಗೊಂಡ ಉಗ್ರನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನಿಗೆ ಭಾರತೀಯ ಸೈನಿಕರು ‘ಮೂರು ಬಾಟಲಿ ರಕ್ತ ದಾನ’ ಮಾಡಿದ್ದಾರೆ ಎಂದು ಸೇನೆಯು ಬುಧವಾರ ತಿಳಿಸಿದೆ.
ಭಯೋತ್ಪಾದಕನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಕೋಟ್ಲಿ ಜಿಲ್ಲೆಯ ಸಬ್ಜ್ಕೋಟ್ ಗ್ರಾಮದ ನಿವಾಸಿ ತಬಾರಕ್ ಹುಸೇನ್ (32) ಎಂದು ಗುರುತಿಸಲಾಗಿದೆ.
ಘಟನೆಯ ವಿವರಗಳನ್ನು ನೀಡಿದ ನೌಶೇರಾ ಬ್ರಿಗೇಡ್‌ನ ಕಮಾಂಡರ್ ಬ್ರಿಗೇಡಿಯರ್ ಕಪಿಲ್ ರಾಣಾ, ʻಆಗಸ್ಟ್ 21 ರಂದು ನೌಶೇರಾದ ಜಂಗಾರ್ ಸೆಕ್ಟರ್‌ನಲ್ಲಿ ನಿಯೋಜಿಸಲಾದ ಸೈನಿಕರು ಭಾರತದ ಗಡಿ ನಿಯಂತ್ರಣ ರೇಖೆಯ ಭಾಗದಲ್ಲಿ ಎರಡ್ಮೂರು ಭಯೋತ್ಪಾದಕರನ್ನು ಗುರುತಿಸಿದ್ದಾರೆ. ಒಬ್ಬ ಭಯೋತ್ಪಾದಕ ಭಾರತೀಯ ಪೋಸ್ಟ್‌ನ ಸಮೀಪಕ್ಕೆ ಬಂದು ಬೇಲಿಯನ್ನು ದಾಟಲು ಪ್ರಯತ್ನಿಸುತ್ತಿದ್ದನು. ಈ ವೇಳೆ ಎಚ್ಚೆತ್ತುಕೊಂಡ ಸೇನೆ ಗುಂಡಿನ ದಾಳಿ ನಡೆಸಿ, ಉಗ್ರನನ್ನು ಸೆರೆಹಿಡಿದಿದೆ. ಈ ವೇಳೆ ಉಗ್ರನ ತೊಡೆ ಮತ್ತು ಭುಜಕ್ಕೆ ಗುಂಡು ತಗುಲಿದ್ದು, ತೀವ್ರ ರಕ್ತಸ್ರಾವವಾಗಿತ್ತು. ಹೀಗಾಗಿ, ಅವನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಉಗ್ರ ಗಾಯಗೊಂಡು ತೀವ್ರ ರಕ್ತಸ್ರಾವಾಗಿದ್ದರಿಂದ ಆತನಿಗೆ ರಕ್ತದ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದರು. ವಿಷಯ ತಿಳಿದ ನಮ್ಮ ತಂಡದ ʻಸೈನಿಕರು ಉಗ್ರನಿಗೆ ಮೂರು ಬಾಟಲಿ ರಕ್ತ ನೀಡಿದ್ದಾರೆʼ. ನಂತ್ರ, ಆತನಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದು, ಇದೀಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿಸಿದ್ದಾರೆ.
ʻನನನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಕರ್ನಲ್ ಯೂನಸ್ ಚೌಧರಿ ಕಳುಹಿಸಿದ್ದಾರೆʼ ಎಂದು ವಿಚಾರಣೆ ವೇಳೆ ಉಗ್ರ ತಬಾರಕ್ ಹುಸೇನ್ ಬಹಿರಂಗಪಡಿಸಿದ್ದಾನೆ. ಈ ಕೃತ್ಯಕ್ಕೆ ಕರ್ನಲ್ 30,000 ರೂ. ನೀಡಿದ್ದಾನೆ ಎಂದು ಭಯೋತ್ಪಾದಕ ತಿಳಿಸಿದ್ದಾನೆ.
ಜಿಲ್ಲಾ ರಜತ ಮಹೋತ್ಸವ : ಉಡುಪಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ – Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…