ಕಾಶ್ಮೀರ ಭಾರತದ ಅವಿಭಾಜ್ಯ ಅಂಗ , ಅದಕ್ಕಾಗಿ ಪ್ರಾಣತ್ಯಾಗಕ್ಕೂ ಸಿದ್ಧ : ಅಮಿತ್ ಶಾ -Vishwanews24

Featured, ರಾಷ್ಟ್ರ ನ್ಯೂಸ್
ನವದೆಹಲಿ::ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಅಕ್ಸಾಯ್ ಚಿನ್ ಪ್ರದೇಶ ಭಾರತದ ಅವಿಭಾಜ್ಯ ಅಂಗವಾದ ಜಮ್ಮು ಮತ್ತು ಕಾಶ್ಮೀರದ ಭಾಗವಾಗಿದೆ ಎಂದು ಗಥಹಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಪ್ರತಿಪಾದಿಸಿದ್ದಾರೆ.
370ನೇ ವಿಧಿ ರದ್ದು  ಹಾಗೂ ಜಮ್ಮು ಮತ್ತು ಕಾಶ್ಮೀರದ ಪುನಾರಚನೆ ವಿಧೇಯಕ 2019 ಅನ್ನು ಲೋಕಸಭೆಯಲ್ಲಿ ಮಂಡಿಸಿ ಮಾತನಾಡಿದ ಅವರು, ಲಡಾಖ್‌ಗೆ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಬೇಕೆಂಬ ದೀರ್ಘಕಾಲದ ಬೇಡಿಕೆಯನ್ನು ಈಗ ನರೇಂದ್ರ ಮೋದಿ ಸರಕಾರ ಈಡೇರಿಸಿದೆ ಎಂದು ನುಡಿದರು.

‘ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಅದರಲ್ಲಿ ಯಾವುದೇ ಸಂದೇಹವಿಲ್ಲ. ನಾನು ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಮಾತನಾಡುವಾಗ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಅಕ್ಸಾಯ್ ಚಿನ್ ಕೂಡ ಸೇರಿಸಿಯೇ ಮಾತನಾಡುತ್ತೇನೆ. ಅದಕ್ಕಾಗಿ ನಾನು ಪ್ರಾಣತ್ಯಾಗಕ್ಕೂ ಸಿದ್ಧ’ ಎಂದು ಅಮಿತ್ ಶಾ ಪ್ರತಿಪಾದಿಸಿದರು.