Featured

ಕಾಶ್ಮೀರ ವಶಪಡಿಸಿಕೊಂಡ ನಂತರ ಭಾರತದ ಮೇಲೆ ದಾಳಿ: ಪಾಕ್ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ -Vishwanews24

ಕಾಶ್ಮೀರ ವಶಪಡಿಸಿಕೊಂಡ ನಂತರ ಭಾರತದ ಮೇಲೆ ದಾಳಿ: ಪಾಕ್ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ -Vishwanews24

ನವದೆಹಲಿ : ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯಿಬ್ ಅಖ್ತರ್ ‘ಗಜ್ವಾ-ಎ-ಹಿಂದ್’ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ನಾವು ಮೊದಲು ಕಾಶ್ಮೀರವನ್ನು ವಶಪಡಿಸಿಕೊಂಡು ನಂತರ ಭಾರತದ ಮೇಲೆ ಘಜ್ವಾ ಎ ಹಿಂದ್ ಗಾಗಿ ಎಲ್ಲ ಕಡೆಯಿಂದ ದಾಳಿ ಮಾಡುತ್ತೇವೆ ಎಂದು ಶೋಯಿಬ್ ಅಖ್ತರ್ ಹೇಳಿದ್ದಾರೆ.

ಸಾಮಾ ಟಿವಿ ಯೊಂದಿಗೆ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ. ಅಖ್ತರ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಖ್ತರ್ ಭಾರತದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮೊದಲ ಕ್ರಿಕೆಟಿಗ ಅಲ್ಲ. ಇದಕ್ಕೂ ಮೊದಲು ಶಾಹಿದ್ ಅಫ್ರಿದಿ ಮತ್ತು ಜಾವೇದ್ ಮಿಯಾಂದ್ ರಂತಹ ಕ್ರಿಕೆಟಿಗರು ಭಾರತದ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ಸಾಮಾ ಟಿವಿಗೆ ನೀಡಿದ ಸಂದರ್ಶನದಲ್ಲಿ ಶೋಯಿಬ್ ‘ಗಜ್ವಾ-ಎ-ಹಿಂದ್’ ಬಗ್ಗೆ ಮಾತನಾಡುತ್ತಿರುವದೃಶ್ಯವಿದೆ. ಗಜ್ವಾ-ಎ-ಹಿಂದ್ ಎಂದರೆ ‘ಭಾರತದ ವಿರುದ್ಧ ಧರ್ಮ ಯುದ್ಧ’ ಎಂದರ್ಥ. ‘ನಮ್ಮ ಧರ್ಮಗ್ರಂಥಗಳಲ್ಲಿ ಘಜ್ವಾ-ಎ-ಹಿಂದ್ ನಡೆಯುತ್ತದೆ ಮತ್ತು ಅಟೊಕ್ ನದಿಯು ಎರಡು ಬಾರಿ ಕೆಂಪು ಬಣ್ಣದಲ್ಲಿ ಇರುತ್ತದೆ ಎಂದು ಬರೆಯಲಾಗಿದೆ. ಅಫ್ಘಾನಿಸ್ತಾನದಿಂದ ಪಡೆಗಳು ಅಟೊಕ್ ವರೆಗೆ ತಲುಪುತ್ತವೆ. ಶಾಮಲ್ ಮಶ್ರಿಕ್ ನಿಂದ ಆ ಪಡೆಗಳು ಉದಯಿಸಿದ ನಂತರ, ಉಜ್ಬೇಕಿಸ್ತಾನದಿಂದ ವಿವಿಧ ತುಕಡಿಗಳು ಬರುತ್ತವೆ. ಇವೆಲ್ಲವೂ ಲಾಹೋರ್ ನ ಐತಿಹಾಸಿಕ ಪ್ರದೇಶವಾದ ಖೋರಾಸನ್ ಅನ್ನು ಉಲ್ಲೇಖಿಸುತ್ತದೆ’ ಎಂದು ಅಖ್ತರ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

14 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

15 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

15 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

16 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

17 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

17 hours ago