ನವದೆಹಲಿ: ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರವು (ಪಿಒಕೆ) ಭಾರತಕ್ಕೆ ಸೇರಿದ ಭೂಭಾಗ. ಭಾರತವು ಮುಂದೊಂದು ದಿನ ಈ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸುತ್ತದೆ ಎಂಬ ವಿಶ್ವಾಸವಿದೆ’ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್. ಜೈಶಂಕರ್ ಮಂಗಳವಾರ ಹೇಳಿದರು.
ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಬಗ್ಗೆ ಭಾರತದ ನಿಲುವು ಹಿಂದಿನಿಂದಲೂ ಸ್ಪಷ್ಟವಾಗಿದೆ ಎಂದರು.
‘ಒಂದು ನೆರೆರಾಷ್ಟ್ರವು ಭಾರತಕ್ಕೆ ವಿಶೇಷವಾದ ಸವಾಲುಗಳನ್ನು ಒಡ್ಡುತ್ತಿದೆ. ಆ ರಾಷ್ಟ್ರವು ಗಡಿಯಾಚಿ ನಿಂದ ಭಯೋತ್ಪಾದನಾ ಕೃತ್ಯ ನಡೆಸುವು
ದನ್ನು ನಿಲ್ಲಿಸುವವರೆಗೂ ಆ ಸವಾಲು ಮುಂದುವರಿಯಲಿದೆ’ ಎಂದು ಪಾಕಿಸ್ತಾನವನ್ನು ಉಲ್ಲೇಖಿಸದೆ ಹೇಳಿದರು.
‘ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನದ ಜೊತೆಗೆ ಮಾತುಕತೆಯೇ ಇಲ್ಲ. ಬದಲಿಗೆ, ಭಯೋತ್ಪಾದನೆಯೇ ಮುಖ್ಯ ವಿಷಯವಾಗಬೇಕು. ನೆರೆರಾಷ್ಟ್ರವೊಂದು ನಮ್ಮ ದೇಶದೊಳಗೆ ಭಯೋತ್ಪಾಕ ಕೃತ್ಯಗಳನ್ನು ನಡೆಸುತ್ತಿದ್ದರೂ ಆ ರಾಷ್ಟ್ರದ ಜೊತೆ ಮಾತುಕತೆಗೆ ಮುಂದಾಗುವ ಯಾವುದಾದರೂ ರಾಷ್ಟ್ರ ವಿಶ್ವದಲ್ಲಿ ಇದೆಯೇ? ನಮ್ಮ ನಿಲುವು ಅತ್ಯಂತ ಸ್ಪಷ್ಟವಾಗಿದೆ. ಅಸಹಜತೆ ಇರುವುದು ಅವರ ನಡತೆಯಲ್ಲಿ’ ಎಂದು ಜೈಶಂಕರ್ ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…