ಇಸ್ಲಾಮಾಬಾದ್: ಕಾಶ್ಮೀರಕ್ಕಾಗಿ ನಾವು ಏನು ಮಾಡಲು ಕೂಡ ಸಿದ್ದವಾಗಿದ್ದೇವೆ, ಕಾಶ್ಮೀರದ ವಿಷಯ ಕುರಿತಾಗಿ ನಾವು ಮಾತನಾಡಲಿ ಸಿದ್ಧವಿದ್ದು, ಭಾರತ ಒಪ್ಪುತ್ತಿಲ್ಲ. ಪದೇ ಪದೇ ನಮ್ಮ ಮೇಲೆ ಆರೋಪಗಳನ್ನು ಮಾಡುತ್ತಾ ಬಂದಿದ್ದು, ನಮ್ಮನ್ನು ಬ್ಲ್ಯಾಕ್ ಲಿಸ್ಟ್ ಗೆ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ.
ಪಾಕ್ ಪ್ರಧಾನಿ ಭಾರತಕ್ಕೆ ನೇರವಾಗಿಯೇ ಪರಮಾಣು ಬೆದರಿಕೆ ಹಾಕಿದ್ದು, ಭಾರತ ನಮ್ಮನ್ನು ದಿವಾಳಿಯಾಗಿಸಲು ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ.
ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ ಎಂದು ಹೇಳುವ ಮೂಲಕ ಮತ್ತೊಮ್ಮೆ ಕಾಶ್ಮೀರದ ಬಗ್ಗೆ ಮಾತನಾಡಿರುವ ಇಮ್ರಾನ್ ಖಾನ್, ಕಾಶ್ಮೀರ ವಿಚಾರವಾಗಿ ನಿರ್ಧರಿಸುವ ಸಮಯ ಬಂದಿದ್ದು, ನಿರ್ಣಾಯಕ ತೀರ್ಮಾನ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.
ಕಾಶ್ಮೀರ ವಿಚಾರವಾಗಿ ಭಾರತದೊಂದಿಗೆ ಮಾತುಕತೆ ನಡೆಸಿದಾಗ ಭಯೋತ್ಪಾದನೆ ಬಗ್ಗೆ ಆರೋಪ ಮಾಡಿತು. ಭಯೋತ್ಪಾದನೆ ಹರಡಿದೆ ಎಂದು ನಮ್ಮ ಮೇಲೆ ಆರೋಪ ಹೊರಿಸಲು ಭಾರತವು ಅವಕಾಶವನ್ನು ಹುಡುಕುತ್ತಲೇ ಇದೆ. ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವ ಮೂಲಕ ಭಾರತ ದೊಡ್ಡ ತಪ್ಪು ಮಾಡಿದೆ. ಕಾಶ್ಮೀರ ವಿಚಾರವಾಗಿ ಪರಮಾಣು ಅಸ್ತ್ರ ಸಹಿತ ಪಾಕಿಸ್ತಾನ ಯಾವುದೇ ಹಂತಕ್ಕೂ ಹೋಗಲು ಸಿದ್ದ ಎಂದು ಎಚ್ಚರಿಸಿದ್ದಾರೆ.
ಭಾರತವನ್ನು ಹಿಂದೂಗಳ ರಾಷ್ಟ್ರವನ್ನಾಗಿ ಮಾಡಲು ಅರ್ ಎಸ್ ಎಸ್ ಪ್ರಯತ್ನಿಸುತ್ತಿದೆ, ಪ್ರಧಾನಿ ನರೇಂದ್ರ ಮೋದಿಯವರ ಒಂದು ತಪ್ಪಿನಿಂದ ಕಾಶ್ಮೀರಿಗರಿಗೆ ಸ್ವಾತಂತ್ರ್ಯದ ದೊಡ್ಡ ಅವಕಾಶ ಲಭಿಸಿದೆ. ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ನಿರ್ಧಾರದಿಂದ ಈ ವಿಚಾರ ಅಂತರಾಷ್ಟ್ರೀಯ ವಿಷಯವಾಗಿ ಬದಲಾಗಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…