ಬ್ಯಾಂಕಾಕ್:ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಭಾರತವು ಮಾತುಕತೆ ನಡೆಸುವುದಿದ್ದರೆ ಅದು ಪಾಕಿಸ್ತಾನದ ಜೊತೆಗೆ ಮಾತ್ರ. ಮಧ್ಯಸ್ಥಿಕೆಗೆ ಮತ್ತೊಬ್ಬರ ಅಗತ್ಯವಿಲ್ಲ. ಇದು ಭಾರತ ಮತ್ತು ಪಾಕಿಸ್ತಾನಕ್ಕೆ ಮಾತ್ರ ಸಂಬಂಧಿಸಿದ ದ್ವಿಪಕ್ಷೀಯ ವಿಚಾರ’ ಎಂದು ಭಾರತ ಸರ್ಕಾರ ಅಮೆರಿಕಕ್ಕೆ ಮತ್ತೊಮ್ಮೆ ಸ್ಪಷ್ಪಪಡಿಸಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಕಾಶ್ಮೀರ ವಿವಾದ ಪರಿಹಾರಕ್ಕಾಗಿ ಎರಡೂ ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ’ ಎಂದು ಶುಕ್ರವಾರ ಮುಂಜಾನೆ ಮತ್ತೊಮ್ಮೆ ಹೇಳಿದ್ದರು. ಟ್ರಂಪ್ ಹೇಳಿಕೆ ಬಹಿರಂಗಗೊಂಡ ಕೆಲವೇ ಗಂಟೆಗಳಲ್ಲಿ ಭಾರತ ತನ್ನ ನಿಲುವನ್ನು ಪುನರುಚ್ಚರಿಸಿದೆ.
ಆಸಿಯಾನ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಬ್ಯಾಂಕಾಕ್‌ಗೆ ತೆರಳಿರುವ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್.ಜೈಂಕರ್ ಭಾರತ ಸರ್ಕಾರದ ನಿಲುವನ್ನು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರನ್ನು ಭೇಟಿಯಾಗಿ ‘ಕಾಶ್ಮೀರದ ಬಗ್ಗೆ ಭಾರತವು ಮಾತುಕತೆ ನಡೆಸುವುದಿದ್ದರೆ ಅದು ಪಾಕಿಸ್ತಾನದ ಜೊತೆಗೆ ಮಾತ್ರ’ ಎನ್ನುವ ನಮ್ಮ (ಭಾರತದ) ನಿಲುವನ್ನು ಸ್ಪಷ್ಟಪಡಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…