Featured

ಕಾಶ್ಮೀರ ಸಮಸ್ಯೆಯನ್ನು ಮಾತುಕತೆ ಮೂಲಕವೇ ಬಗೆಹರಿಸುಕೊಳ್ಳುತ್ತೇವೆ ಅದಕ್ಕೆ ಅಮೇರಿಕಾ ಮಧ್ಯಸ್ಥಿಕೆ ಅಗತ್ಯವಿಲ್ಲ : ಟ್ರಂಪ್ ಗೆ ಭಾರತ -Vishwanews24

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಪ್ಪಿದರೆ ದಶಕಗಳಷ್ಟು ಹಳೆಯದಾದ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಸಲಹೆಯನ್ನು ಭಾರತ ತಿರಸ್ಕರಿಸಿದೆ.

ಭಾರತ, ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳನ್ನು ಕೇವಲ ದ್ವಿಪಕ್ಷೀಯ ಮಾತುಕತೆ ಮೂಲಕವೇ ಬಗೆಹರಿಸಿಕೊಳ್ಳುವುದಾಗಿ ಭಾರತ ಸ್ಪಷ್ಟಪಡಿಸಿದೆ.

ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಶ್ವೇತ ಭವನದಲ್ಲಿ ಟ್ರಂಪ್ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ತಿಳಿಸಿದ್ದರು.

ಅಮೇರಿಕ ಪ್ರವಾಸದಲ್ಲಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಶ್ವೇತ ಭವನದಲ್ಲಿ ಟ್ರಂಪ್ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಭಾರತವೇ ಆಹ್ವಾನ ನೀಡಿದಂತೆ, “ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸಲು ಸಿದ್ಧ” ಎಂದು ತಿಳಿಸಿದ್ದರು. ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದಂತೆ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ. ಭಾರತ, ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳನ್ನು ಕೇವಲ ದ್ವಿಪಕ್ಷೀಯ ಮಾತುಕತೆ ಮೂಲಕವೇ ಬಗೆಹರಿಸುಕೊಳ್ಳುತ್ತೇವೆ ಅದಕ್ಕೆ ಅಮೇರಿಕಾ ಮಧ್ಯಸ್ಥಿಕೆ ಅಗತ್ಯವಿಲ್ಲ ಎಂದಿದೆ.

ಟ್ರಂಪ್ ಹೇಳಿಕೆ ಹೊರಬೀಳುತ್ತಿದ್ದಂತೆಯೇ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಕಾಶ್ಮೀರ ಸಮಸ್ಯೆಯನ್ನು ಭಾರತವು ದ್ವಿಪಕ್ಷೀಯ ನೆಲೆಯಲ್ಲಿ ಬಗೆಹರಿಸುವಲ್ಲಿ ಇಚ್ಚಿಸುತ್ತದೆ. ತನ್ನ ನಿಲುವಿಗೆ ಭಾರತ ಎಂದಿಗೂ ಬದ್ಧವಾಗಿರಲಿದೆ ಎಂದು ತಿಳಿಸಿದ್ದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

8 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago