ಕಾಸರಗೋಡು:ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ವಿದ್ಯಾರ್ಥಿನಿ ಪೆರುಂಬಳ ಬೇನೂರಿನ ಅಂಬಿಕಾ ಅವರ ಪುತ್ರಿ ಅಂಜುಶ್ರೀ (19) ಸಾವಿಗೆ ವಿಷಾಹಾರ ಕಾರಣವಲ್ಲ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ತಿಳಿಸಿದೆ.
ಕರುಳಿನ ನಿಷ್ಕ್ರಿಯತೆ ಹಾಗೂ ಜಾಂಡೀಸ್‌ನಿಂದಲೂ ಬಳಲುತ್ತಿದ್ದರು ಎಂದು ವರದಿಯಲ್ಲಿ ಹೇಳಿದೆ. ಹೆಚ್ಚಿನ ತನಿಖೆಗಾಗಿ ಅವರ ಆಂತರಿಕ ಅವಯವಗಳನ್ನು ರಾಸಾಯನಿಕ ಪರೀಕ್ಷೆಗೆ ಕಳುಹಿಸಲಾಗಿದೆ.
ಇದೇ ವೇಳೆ ಅಂಜುಶ್ರೀ ದೇಹದಲ್ಲಿ ವಿಷಾಂಶ ಪತ್ತೆಯಾಗಿದೆಯೆಂದೂ ವರದಿಯಲ್ಲಿ ಹೇಳಿದೆ.
ಆಹಾರದಲ್ಲಿನ ವಿಷ ಅಲ್ಲವೆಂದು ಫಾರೆನ್ಸಿಕ್ ಸರ್ಜನ್ ಅವರ ಅಭಿಪ್ರಾಯವಾಗಿದೆ. ವಿಷವು ಕರುಳನ್ನು ಕಾರ್ಯನಿರ್ವಹಿಸದಂತೆ ನಿಲ್ಲಿಸಿದೆ ಎಂದು ವರದಿ ತಿಳಿಸಿದೆ.
ಶನಿವಾರ ಬೆಳಗ್ಗೆ ಅಂಜುಶ್ರೀ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದರು. ಡಿ. 31ರಂದು ಕುಳಿಮಂದಿ ಸೇವಿಸಿದ ಕಾರಣ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ವಿಷಾಹಾರ ಸೇವನೆಯಿಂದ ಸಾವು ಸಂಭವಿಸಿತ್ತೆಂದು ಸಂಶಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೊಟೇಲ್ ಮಾಲಕ ಸಹಿತ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.
ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…
ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…
ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ…
ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…
ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…